ಸಣ್ಣ ಪ್ರಮಾಣದ ಭೂಕಂಪ: ಕೊಡಗಿನ ಜನ ಆತಂಕ ಪಡುವ ಅಗತ್ಯವಿಲ್ಲ- ಸಚಿವ ಆರ್.ಅಶೋಕ್.

kannada t-shirts

ಕೊಡಗು,ಜುಲೈ,7,2022(www.justkannada.in):  ರಾಜ್ಯದ ಕರಾವಳಿ ಮಲೆನಾಡಿನ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಈ ಮಧ್ಯೆ ಕೊಡಗು ಜಿಲ್ಲೆಯಲ್ಲಿ ಮಳೆಯಿಂದಾಗಿ ಭೂಕುಸಿತ ಹಾನಿಯಾಗಿದ್ದು ಈ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಇಂದು ಕೊಡಗು ಜಿಲ್ಲೆ ಮಡೀಕೇರಿಯ ಚೆಂಬು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಈ ನಡುವೆ ಅಧಿಕಾರಿಗಳ ಜತೆ ಸಭೆ ನಡೆಸಿ ಮಾಹಿತಿ ಪಡೆದರು. ಬಳಿಕ ಮಾತನಾಡಿದ ಸಚಿವ ಆರ್.ಅಶೋಕ್,  ಸಣ್ಣ ಪ್ರಮಾಣದ ಭೂಕಂಪವಾಗುತ್ತಿದೆ ಅಷ್ಟೆ. ಆತಂಕ ಪಡುವ ಅಗತ್ಯವಿಲ್ಲ. ವಿಜ್ಞಾನಿಗಳು ಅಧ್ಯಯನ ಮಾಡುತ್ತಿದ್ದಾರೆ. ಹೈದರಾಬಾದ್ ಭೂಗರ್ಭ ಶಾಸ್ತ್ರಜ್ಞರು ಬಂದಿದ್ದಾರೆ.  ನಾಳೆ ವರದಿ ನೀಡುತ್ತಾರೆ. ಕೊಡಗಿನ ಜನ ಆತಂಕ ಪಡುವ ಅಗತ್ಯವಿಲ್ಲ ಎಂದರು.

ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆರಾಯನ ಅಬ್ಬರ ಜೋರಾಗಿದ್ದು ಜುಲೈ11 ರವರೆಗೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಕರಾವಳಿಯಲ್ಲೇ ಹೆಚ್ಚು ಮಳೆ ಆಗುವ ಕಾರಣಕ್ಕೆ ಗುರುವಾರ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಈ ಮೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.

Key words: rain-Kodagu-Minister- R. Ashok.

website developers in mysore