ಬೆಂಗಳೂರು ಸೇರಿ ರಾಜ್ಯದಲ್ಲಿ ಮೂರು ದಿನಗಳ ಕಾಲ ಮಳೆ ಸಾಧ್ಯತೆ.

ಬೆಂಗಳೂರು,ಡಿಸೆಂಬರ್,10,2022(www.justkannada.in):  ತಮಿಳುನಾಡಿನಲ್ಲಿ ಮಾಂಡೌಸ್ ಚಂಡಮಾರುತ ಎಫೆಕ್ಟ್ ನಿಂದಾಗಿ ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಮಳೆಯಾಗುತ್ತಿದೆ.ನಿನ್ನೆಯಿಂದಲೇ ತುಂತುರು ಮಳೆ ಶುರುವಾಗಿದ್ದು ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ 3 ದಿನ ಮಳೆಯಾಗುವ ಸಾಧ್ಯತೆಯಿದೆ. ಇಂದು ಮತ್ತು ನಾಳೆ ಬೆಂಗಳೂರು ನಗರದಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಹಳದಿ ಅಲರ್ಟ್​​​  ಘೋಷಣೆ ಮಾಡಲಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ  ಕರ್ನಾಟಕದ ದಕ್ಷಿಣ ಒಳನಾಡಿಗೆ ಇಂದು, ನಾಳೆ ಗುಡುಗು ಸಹಿತ ಮಳೆ ಪ್ರವೇಶಿಸುವ ಸಾಧ್ಯತೆಯಿದೆ. ಕೋಲಾರದಲ್ಲಿ ನಿನ್ನೆ ರಾತ್ರಿಯಿಂದ ಶೀತಗಾಳಿ ಸಹಿತ ಜಡಿ ಮಳೆ ಸುರಿಯುತ್ತಿದೆ. ರಾತ್ರಿಯಿಂದ‌ ಒಂದೇ ಸಮನೆ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.  ಗಾಳಿ ಸಹಿತ ಮಳೆ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Key words:  Rain – likely -three days – state- including- Bangalore.