ರಾಜ್ಯದ ಹಲವೆಡೆ ವ್ಯಾಪಕ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

kannada t-shirts

ಬೆಂಗಳೂರು,ಸೆಪ್ಟಂಬರ್,6,2020(www.justkannada.in): ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಹಲವೆಡೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು ಈ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.jk-logo-justkannada-logo

ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಕೊಡಗು, ಹಾಸನ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳಲ್ಲಿ  ಮಳೆರಾಯ ಅಬ್ಬರಿಸಲಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದ್ದು ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.rain-state-many-disitrict-yellow-alert

ಈಗಾಗಲೇ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಇತ್ತೀಚೆಗೆ ರಾಜ್ಯದಲ್ಲಿ ಕೊಡಗು, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮೈಸೂರು ಹಾಸನ, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿ ಪ್ರವಾಹ ಸ್ಥಿತಿ ನಿರ್ಮಾಣವಾಗಿತ್ತು.  ಇದೀಗ ಮತ್ತೆ ಮೂರು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

 

Key words: rain –state-many-disitrict-  Yellow Alert

 

website developers in mysore