ತಗ್ಗಿತು ಮಳೆ, ಇನ್ಮುಂದೆ ಚುಮು ಚುಮು ಚಳಿ: ಹವಾಮಾನ ಇಲಾಖೆ

ಅಕಾಲಿಕವಾಗಿ ಕಾಡಿದ ಮಳೆ ಆರ್ಭಟ ಇನ್ನು ಮುಂದೆ ನಿಲ್ಲಲಿದ್ದು, ಚುಮುಚುಮು ಚಳಿ ಆರಂಭವಾಗಲಿದೆ.

ಹೌದು. ರಾಜ್ಯಾದ್ಯಂತ ಮಳೆ ಕಡಿಮೆಯಾಗಿದ್ದು, ಒಣಹವೆ ಮುಂದುವರೆಯಲಿದೆ. ಜತೆಗೆ ಚಳಿ ವಾತಾವರಣ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಒಣಹವೆ ಮುಂದುವರೆಯಲಿದೆ.

ಕರ್ನಾಟಕದ ಹಲವಾರು ದಕ್ಷಿಣ ಒಳನಾಡಿನ ಜಿಲ್ಲೆಗಳು ಸೇರಿದಂತೆ ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಿನಲ್ಲಿ ಒಣ ಹವೆ ಮುಂದುವರೆಯಲಿದೆ.

ಬೆಂಗಳೂರಲ್ಲಿ ಬೆಳಗ್ಗೆ ಶುಭ್ರ ಆಕಾಶವಿರಲಿದ್ದು, ಸಂಜಯ ವೇಳೆ ಸ್ವಲ್ಪ ಮೋಡಕವಿಯುವ ಸಾಧ್ಯತೆ ಇದೆ. 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.