ಬೆಂಗಳೂರಿನಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಮುನ್ಸೂಚನೆ: ಯಲ್ಲೋ ಅಲರ್ಟ್ ಘೋಷಣೆ.

Promotion

ಬೆಂಗಳೂರು,ಸೆಪ್ಟಂಬರ್,17,2022(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದೆರಡು ವಾರದಿಂದ ಸುರಿಯುತ್ತಿರುವ ಭಾರಿಮಳೆಗೆ ಜನರು ತತ್ತರಿಸಿದ್ದು ಈ ನಡುವೆ ಮತ್ತೆ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಕೇಂದ್ರ ಹವಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ಮತ್ತೆ ಮಳೆರಾಯ ಅಬ್ಬರಿಸಲಿದ್ದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಕರಾವಳಿ ಮಲೆನಾಡು ಭಾಗ ಸೇರಿದಂತೆ ರಾಜ್ಯ ವಿವಿಧ ಕಡೆಗಳಲ್ಲೂ ವರುಣನ ಅಬ್ಬರ ಜೋರಾಗಿದೆ. ಹೀಗಾಗಿ  ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್  ಘೋಷಣೆ ಮಾಡಲಾಗಿದೆ.

ಇನ್ನು ಬೆಂಗಳೂರಿನ ಮಳೆ ಪ್ರವಾಹ ಪರಿಸ್ಥಿತಿ ಬಗ್ಗೆ ಈಗಾಗಲೇ  ಹೈಕೋರ್ಟ್ ಕಳವಳ ವ್ಯಕ್ತಪಡಿಸಿ, ನಿವಾಸಿಗಳ ಕುಂದುಕೊರತೆಯನ್ನು ಆಲಿಸಲು ಪ್ರತಿ ವಾರ್ಡ್​ನಲ್ಲೂ ಕುಂದುಕೊರತೆ ವಿಭಾಗವನ್ನು ಸ್ಥಾಪಿಸುವಂತೆ ​ ಬಿಬಿಎಂಪಿಗೆ ಸೂಚನೆ ನೀಡಿದೆ.

Key words: Rain – three days – Bengaluru-yellow alert