Tuesday, August 4, 2026

BDA Apartments

Home Front Page ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯ ಮುನ್ಸೂಚನೆ.

ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯ ಮುನ್ಸೂಚನೆ.

ಬೆಂಗಳೂರು,ಮಾರ್ಚ್,27,2023(www.justkannada.in): ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ಹಾಸನ, ಮೈಸೂರು ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ.  ಇಂದು ಕೊಡಗು, ಬೀದರ್ ಕಲಬುರುಗಿ ರಾಯಚೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ2 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಮಾನ ಇಲಾಖೆಯಿಂದ  ಮುನ್ಸೂಚನೆ ನೀಡಿದೆ.

Key words: Rain- three days – today – state.