ರಾಜಭವನ ಮುತ್ತಿಗೆಗೆ ಯತ್ನ ಹಿನ್ನೆಲೆ: ದೋಸ್ತಿ ಪಕ್ಷದ ಕಾರ್ಯಕರ್ತರು ಪೊಲೀಸರ ವಶಕ್ಕೆ…

ಬೆಂಗಳೂರು,ಜು,10,2019(www.justkannada.in):  ಬಿಜೆಪಿ ಅಪರೇಷನ್ ಕಮಲದ ಮೂಲಕ ಸರ್ಕಾರ ಕೆಡವಲು ಮುಂದಾಗಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಪಕ್ಷದ ನಾಯಕರು ಇಂದು ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಸಿದರು.

ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್- ಜೆಡಿಎಸ್  ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಕಾಂಗ್ರೆಸ್ ನಾಯಕರಾದಮಲ್ಲಿಕಾರ್ಜುನ ಖರ್ಗೆ, ಗುಲಾಬ್ ನಬೀ ಆಜಾದ್,  ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು ಉಪಸ್ಥಿತರಿದ್ದರು.

ಪೊಲೀಸರು ವಶಕ್ಕೆ ಪಡೆದ ಹಿನ್ನೆಲೆ  ಸಿದ್ದರಾಮಯ್ಯ ಕೆ.ಸಿ ವೆಣುಗೋಪಾಲ್  ರಸ್ತೆಯಲ್ಲೇ ಕುಳಿದು ಪ್ರತಿಭಟನೆಗೆ ಮುಂದಾದರು. ಇನ್ನೊಂದೆಡೆ ಬಿಜೆಪಿ ರಾಜಭವನಕ್ಕೆ  ತೆರಳಿ ರಾಜ್ಯಪಾಲರನ್ನ ಭೇಟಿ ಮಾಡಿ ಅತೃಪ್ತ ಶಾಸಕರ ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ವಿಳಂಬ ಮಾಡುತ್ತಿದ್ದಾರೆ. ಕೂಡಲೇ ರಾಜೀನಾಮೆ ಅಂಗೀಕರಿಸುವಂತೆ ಸೂಚನೆ ನೀಡಿ ಎಂದು ಬಿಜೆಪಿ ನಿಯೋಗ ಮನವಿ ಮಾಡಿತು.

 

Key words: rajabhavan-jds-congress- activists- detained – police.