ಗೋಕಳ್ಳರಿಗೆ ಏಟು ಬಿದ್ದರೆ ಬೊಬ್ಬೆ ಹೊಡೆಯುತ್ತಾರೆ: ಕಾಂಗ್ರೆಸ್ ನಾಯಕರು ಈಗ ಯಾವ ಬಿಲದಲ್ಲಿ ಅಡಗಿದ್ದಾರೆ? ಸಂಸದ ಪ್ರತಾಪ್ ಸಿಂಹ ವಾಗ್ದಾಳಿ.

Promotion

ಮೈಸೂರು,ಜೂನ್,29,2022(www.justkannada.in): ರಾಜಸ್ತಾನದಲ್ಲಿ ನಡೆದ ಹಿಂದೂ ಟೈಲರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ, ಗೋಕಳ್ಳರಿಗೆ ಏಟು ಬಿದ್ದರೆ ಬೊಬ್ಬೆ ಹೊಡೆಯುತ್ತಾರೆ. ಕಾಂಗ್ರೆಸ್ ನಾಯಕರು ಈಗ ಯಾವ ಬಿಲದಲ್ಲಿ ಅಡಗಿದ್ದಾರೆ? ಎಂದು ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ,  ಕರ್ನಾಟಕದಲ್ಲೂ ಕಾಂಗ್ರೆಸ್​ಗೆ ಅಧಿಕಾರ ಕೊಟ್ಟರೆ ಇದೇ ಪರಿಸ್ಥಿತಿ ಉಂಟಾಗುತ್ತದೆ. ಇದು ಕರ್ನಾಟಕದ ಜನರಿಗೆ ಎಚ್ಚರಿಕೆ ಗಂಟೆ. ರಾಜಸ್ಥಾನ ಸರ್ಕಾರದ ಮೇಲೆ ನನಗೆ ವಿಶ್ವಾಸವಿಲ್ಲ. ಹಿಂದುಗಳ ಧ್ವನಿ ಅಡಗಿಸಲು ಈ ಕೃತ್ಯ ನಡೆದಿದೆ. ಇದರ ಹಿಂದೆ ಕಾಂಗ್ರೆಸ್ ಇದೆ. ಕಾಂಗ್ರೆಸ್​ನವರ ಮುಸ್ಲಿಂ ಓಲೈಕೆಯಿಂದ ಈ ರೀತಿ ನಡೆಯುತ್ತಿದೆ ಎಂದು ಆರೋಪಿಸಿದರು.

ಒಳ್ಳೆಯ ಮುಸ್ಲಿಮರು ಯಾಕೆ ಈಗ ಮಾತಾಡ್ತಿಲ್ಲ? ಈ ಕೊಲೆ ತಪ್ಪು ಅಂತಾ ಆರೋಪಿಗಳ ವಿರುದ್ಧ ಫತ್ವಾ ಹೊರಡಿಸಲಿ ನೋಡೋಣಾ? ಶುಕ್ರವಾರ ಪ್ರಾರ್ಥನೆಯಾದ ನಂತರ ಕಲ್ಲು ತೂರುವಂತೆ ಹೇಳುವುದು ನಿಮ್ಮ ಕೆಲಸವಾ? ಎಂದು ಪ್ರತಾಪ್​ ಸಿಂಹ ಕಿಡಿಕಾರಿದ್ದಾರೆ.

ಗೋಕಳ್ಳರಿಗೆ ಎರಡೇಟು ಬಿದ್ದರೆ ಬೊಬ್ಬೆ ಹಾಕುವವರು ಈಗ ಎಲ್ಲಿದ್ದಾರೆ? ಏನ್ಮಾಡ್ತಿದ್ದಾರೆ?  ಟ್ವೀಟ್ ಮಾಡಿ ಮನೆಯೊಳಗೆ ಕುಳಿತರೆ ಮುಗೀತಾ ನಿಮ್ಮ ಕೆಲಸ? ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

Key words: rajastan-murder-case-MP-Prathap simha-congress