ರಾಜ್ಯಸಭಾ ಚುನಾವಣೆ:  ಜೆಡಿಎಸ್ ನಿಯೋಗದಿಂದ ಮಾಜಿ ಸಿಎಂ ಸಿದ್ಧರಾಮಯ್ಯ ಭೇಟಿ.

ಬೆಂಗಳೂರು,ಜೂನ್,1,2022(www.justkannada.in):  ರಾಜ್ಯಸಭಾ ಚುನಾವಣಾ ಕಣ ರಂಗೇರಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನಿವಾಸಕ್ಕೆ ಜೆಡಿಎಸ್ ನಾಯಕರ ನಿಯೋಗ ಭೇಟಿ ನೀಡಿದ್ದು ಭಾರಿ ಕುತೂಹಲಕ್ಕೆ ಕಾರಣವಾಗಿದೆ.

ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಬಿ.ಎಂ. ಫಾರೂಕ್ ಸೇರಿದಂತೆ ಜೆಡಿಎಸ್ ನ ಹಲವು ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಕಾಂಗ್ರೆಸ್ ನ 2ನೇ ಅಭ್ಯರ್ಥಿಯನ್ನು ಹಿಂಪಡೆದು ಜೆಡಿಎಸ್  ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

ಸಿದ್ಧರಾಮಯ್ಯ ಭೇಟಿ ಬಳಿಕ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಟಿ.ಎ ಶರವಣ, ಹೆಚ್.ಡಿ ದೇವೇಗೌಡರು ಹೆಚ್.ಡಿ ಕುಮಾರಸ್ವಾಮಿ ಸೂಚನೆ ಮೇರೆಗೆ ಭೇಟಿ ನೀಡಿದ್ದೇವೆ.  ಕಾಂಗ್ರೆಸ್ ಅಭ್ಯರ್ಥಿ ವಾಪಸ್ ಪಡೆಯುವ ಭರವಸೆ ಇದೆ. ನಾವು 32 ಸೀಟು ಇದ್ದೇವೆ ನಮಗೆ ಅವಕಾಶ ನೀಡಿ ಎಂದಿದ್ದೇವೆ. ಸಿದ್ಧರಾಮಯ್ಯ ನೋಡೋಣ ಎಂದು ತಿಳಿಸಿದ್ದಾರೆ ಎಂದರು.

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿ ಬೆಂಬಲಿಸಬಾರದು. ಜೆಡಿಎಸ್ ಗೆ ಬೆಂಬಲ ನೀಡಿ ಎಂದು ಮನವಿ ಮಾಡಿದ್ದೇವೆ. ಕಾಂಗ್ರೆಸ್ ನಾಯಕರು ಬಿಜೆಪಿಗೆ ಬೆಂಬಲಿಸುವುದು ಪಕ್ಷದ ಧೋರಣೆಗೂ ಸೂಕ್ತವಲ್ಲ. ಹೀಗಾಗಿ ರಾಜಕೀಯ ನೆಲೆಗಟ್ಟಿನಲ್ಲಿ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರನ್ನು ಬೆಂಬಲಿಸುವಂತೆ ತಿಳಿಸಿದ್ದೇವೆ ಎಂದು ಶರವಣ ತಿಳಿಸಿದರು.

Key words: Rajya Sabha-elections-Former CM =Siddaramaiah -visits –JDS- delegation