ರಾಜ್ಯಸಭೆ ಚುನಾವಣೆ: ‘ಕೈ’ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ….

ಬೆಂಗಳೂರು, ಜೂ.8,2020(www.justkannada.in): ಜೂನ್ 19 ರಂದು ರಾಜ್ಯಸಭೆ ನಾಲ್ಕು ಸ್ಥಾನಗಳಿಗೆ ಚುನಾವಣೆ ಹಿನ್ನೆಲೆ, ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಇಂದು ನಾಮಪತ್ರ ಸಲ್ಲಿಸಿದರು.

ವಿಧಾನಸಭೆ ಕಾರ್ಯದರ್ಶಿ ಕಚೇರಿಗೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು. ಮಲ್ಲಿಕಾರ್ಜುನ ಖರ್ಗೆ ಅವರಿಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ, ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸಚಿವ ಆರ್.ವಿ ದೇಶಪಾಂಡೆ ಸೇರಿದಂತೆ ಕಾಂಗ್ರೆಸ್ ನಾಯಕರು ಸಾಥ್ ನೀಡಿದರು.rajyasabha- election-congress- candidate- mallikarjun kharge- nomination file

ಇದಕ್ಕೂ ಮೊದಲು ಕ್ವೀನ್ಸ್‌ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ನೇತೃತ್ಬದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಎಲ್ಲ ಶಾಸಕರು ಚುನಾವಣೆಯಲ್ಲಿ ಜಾಗರೂಕತೆಯಿಂದ ಮತದಾನ ಮಾಡುವಂತೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೂಚಿಸಿದ್ದಾರೆ. ಶಾಸಕಾಂಗ ಪಕ್ಷದ ಸಭೆಯ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಬಿ ಫಾರಂ ನೀಡಿದರು. ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಬಿಜೆಪಿಯಿಂದ ಇಬ್ಬರು ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ತಲಾ ಒಬ್ಬರು ಸ್ಪರ್ಧಿಸುತ್ತಿದ್ದಾರೆ.

Key words: rajyasabha- election-congress- candidate- mallikarjun kharge- nomination file