ರಾಜ್ಯಸಭೆ ಚುನಾವಣೆ:  ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಇಬ್ಬರಿಗೂ ಅಭಿನಂದನೆ ಸಲ್ಲಿಸಿದ ನಳೀನ್ ಕುಮಾರ್ ಕಟೀಲ್…

rajyasabha-election-nalin-kumar-kateel-congratulates-both-bjp-candidate
Promotion

ಕೊಪ್ಪಳ,ಜೂ,8,2020(www.justkannada.in): ಜೂನ್ 19 ರಂದು ರಾಜ್ಯಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಅಶೋಕ್ ಗಸ್ತಿ ಮತ್ತು ಈರಣ್ಣ ಕಡಾಡಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್  ಅಭಿನಂದನೆ ಸಲ್ಲಿಸಿದರು.

ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್‌ರವರು ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಕಾರಟಗಿಯಲ್ಲಿ ರಾಜ್ಯಸಭಾ ಸದಸ್ಯ ಅಭ್ಯರ್ಥಿಗಳಾಗಿ ನಾಮ ನಿರ್ದೇಶನಗೊಂಡಿರುವ ಅಶೋಕ್ ಗಸ್ತಿ ಅವರಿಗೆ ಸಿಹಿ ತಿನ್ನಿಸಿ, ಅಭಿನಂದನೆ ಸಲ್ಲಿಸಿದರೆ, ಈರಣ್ಣ ಕಡಾಡಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಅಭಿನಂದನೆ ಸಲ್ಲಿಸಿದರು.rajyasabha-election-nalin-kumar-kateel-congratulates-both-bjp-candidate

ಬಳ್ಳಾರಿ ವಿಭಾಗದಲ್ಲಿ ನಡೆದ ಸಂಘಟನಾ ಸಭೆಯಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಯವರಾದ  ಅರುಣ್ ಕುಮಾರ್ ಜೀ, ಸಚಿವರಾದ ಆನಂದ್ ಸಿಂಗ್  ಸಂಸದರಾದ ದೇವೇಂದ್ರಪ್ಪ, ಶಾಸಕರಾದ ಸೋಮಶೇಖರ ರೆಡ್ಡಿ, ಸೋಮಲಿಂಗಪ್ಪ, ಶ್ರೀ ಹಾಲಪ್ಪ ಆಚಾರ್‌ ಸೇರಿದಂತೆ ಹಲವು ವಿಭಾಗದ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು.

Key words: RajyaSabha- election-Nalin Kumar Kateel -congratulates -both – BJP candidate.