ಅಯೋಧ್ಯೆ ಮಾದರಿಯಲ್ಲಿ ರಾಮದೇವರ ಬೆಟ್ಟ ಅಭಿವೃದ್ಧಿ: ಸಿಎಂಗೆ ಸಚಿವ ಅಶ್ವಥ್ ನಾರಾಯಣ್ ಪತ್ರ

Promotion

ಬೆಳಗಾವಿ,ಡಿಸೆಂಬರ್,21,2022(www.justkannada.in):  ಮುಜರಾಯಿ ಇಲಾಖೆಯ ಅಧೀನದಲ್ಲಿರುವ ರಾಮನಗರದ ಐತಿಹಾಸಿಕ ರಾಮದೇವರ ಬೆಟ್ಟದಲ್ಲಿರುವ 19 ಎಕರೆ ಪ್ರದೇಶದಲ್ಲಿ ಅಯೋಧ್ಯೆಯ ರಾಮ ಮಂದಿರದಂತೆಯೇ ಒಂದು ದೇವಸ್ಥಾನವನ್ನು ನಿರ್ಮಿಸಲು ತ್ವರಿತವಾಗಿ ಒಂದು ಅಭಿವೃದ್ಧಿ ಸಮಿತಿಯನ್ನು ರಚಿಸಬೇಕು ಎಂದು ಕೋರಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ ನಾರಾಯಣ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬುಧವಾರ ಪತ್ರ ಬರೆದಿದ್ದಾರೆ.

ವಾನರ ಸಂತತಿಯ ಸುಗ್ರೀವನಿಂದ ಪ್ರತಿಷ್ಠಾಪಿತವಾಗಿದ್ದೆಂಬ ಐತಿಹ್ಯ ಹೊಂದಿರುವ ರಾಮದೇವರ ಬೆಟ್ಟವನ್ನು ದಕ್ಷಿಣದ ಅಯೋಧ್ಯೆಯಂತೆ ಬೆಳೆಸಬೇಕೆನ್ನುವುದು ರಾಮನಗರ ಜಿಲ್ಲೆಯ ಸಾರ್ವಜನಿಕರು ಮತ್ತು ಭಕ್ತಾದಿಗಳ ಒತ್ತಾಯವಾಗಿದೆ. ಬೆಂಗಳೂರಿಗೆ ಸನಿಹದಲ್ಲಿರುವ ಈ ಬೆಟ್ಟವನ್ನು ಭಕ್ತರ ಅಪೇಕ್ಷೆಯಂತೆ ಅಭಿವೃದ್ಧಿಪಡಿಸುವುದರಿಂದ ಸಂಸ್ಕೃತಿ ರಕ್ಷಣೆ ಮತ್ತು ಪ್ರವಾಸೋದ್ಯಮ ಬೆಳವಣಿಗೆ ಎರಡನ್ನೂ ಸಾಧಿಸಲು ಅವಕಾಶವಿದೆ ಎಂದು ಅವರು ತಮ್ಮ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

ಶ್ರೀರಾಮನು ವನವಾಸದ ದಿನಗಳಲ್ಲಿ ಸೀತೆ ಮತ್ತು ಲಕ್ಷ್ಮಣರೊಂದಿಗೆ ರಾಮದೇವರ ಬೆಟ್ಟದಲ್ಲಿ ಒಂದು ವರ್ಷದ ಮಟ್ಟಿಗೆ ಇದ್ದನೆಂಬ ನಂಬಿಕೆ ಇದೆ. ಇಲ್ಲಿರುವ ಪಾತಾಳಗಂಗೆಯ ಉದ್ಭವಕ್ಕೆ ರಾಮನೇ ಕಾರಣ ಎನ್ನುವ ಶ್ರದ್ಧೆ ಇದೆ. ಅಲ್ಲದೆ ಸಪ್ತರ್ಷಿಗಳು ಕೂಡ ಇಲ್ಲಿ ತಪಸ್ಸನ್ನು ಆಚರಿಸಿರುವ ಕುರುಹುಗಳಿವೆ. ಹಾಗೆಯೇ, ಈ ಬೆಟ್ಟವು ದೇಶದ ಏಕೈಕ ರಣಹದ್ದುಗಳ ಸಂರಕ್ಷಿತ ಪ್ರದೇಶವಾಗಿದೆ. ಈ ಪಕ್ಷಿಗಳಿಗೂ ರಾಮಾಯಣಕ್ಕೂ ಸಂಬಂಧವಿರುವುದು ಕೂಡ ಗಮನಾರ್ಹವಾಗಿದೆ ಎಂದು ಸಚಿವ ಅಶ್ವಥ್ ನಾರಾಯಣ್ ಪ್ರಸ್ತಾಪಿಸಿದ್ದಾರೆ.

ಐತಿಹಾಸಿಕ ತಾಣವಾಗಿರುವ ರಾಮದೇವರ ಬೆಟ್ಟವು ತ್ರೇತಾಯುಗದಷ್ಟು ಹಿಂದಿನ ಪರಂಪರೆಯನ್ನು ಹೊಂದಿದೆ. ಇದನ್ನು ಆಕರ್ಷಕವಾಗಿ ಅಭಿವೃದ್ಧಿ ಪಡಿಸಿ, ಮುಂದಿನ ತಲೆಮಾರುಗಳಿಗೂ ದಾಟಿಸಬೇಕು ಎನ್ನುವುದು ಸ್ಥಳೀಯ ಜನರ ಅಭಿಲಾಷೆಯಾಗಿದೆ ಎಂದು ಅವರು ಪತ್ರದಲ್ಲಿ ಗಮನ ಸೆಳೆದಿದ್ದಾರೆ. ಮುಜರಾಯಿ ಖಾತೆ ಸಚಿವೆ ಶಶಿಕಲಾ‌ ಜೊಲ್ಲೆ ಅವರಿಗೂ ಸಚಿವ ಅಶ್ವಥ್ ನಾರಾಯಣ್ ಈ ಪತ್ರವನ್ನು ಬರೆದಿದ್ದಾರೆ.

ENGLISH SUMMARY…

District incharge minister urges the Chief Minister

Ramadevarabetta should be developed as Ayodhye of the South

Belagavi: Dr CN Ashwath Narayan, District in-charge Minister of Ramanagara, has urged Chief Minister Basavaraja Bommai to constitute a development committee to build a temple at Ramadevarabetta in the lines of Sriram temple at Ayodhye.

In a letter written to Chief Minister Basavaraja Bommai and Muzarai Minister Shashikala Jolle, he has demanded that Ramadevarabetta should be developed as the Ayodhye of the South India.

Narayan has said that Sriram temple should be built using 19 acres of space which belong to the Department of Mujarai at Ramadevarabetta.

“There is a strong belief among the people of the region that Sugriva installed Ramadevarabetta. Considering the religious feelings of the people of the district Ramadevarabetta should be developed as an heritage and attractive tourist spot. This would enable to portray our culture as well as nurture tourism,” he has opened.

People also believe that Sri Rama spent an year here during his days of exile in forest, along with Sita and Lakshmana. They also believe that seven great sages did there penance here. In addition, this is a prominent vulture conserved area in the country. The traditional connection between Ramadevarabetta and Ramayana dates back to the era of Tretayug, he has explained in his letter.

Key words: Ramadevarabetta – develop-minister –Ashwath narayan-CM Bommai