ವೀರಾಪುರ ಗ್ರಾಮ ಪ್ರವಾಸಿ ಕೇಂದ್ರವಾಗಿ ಮಾರ್ಪಾಡಲಿದೆ- ಶ್ರೀ ಶಿವಕುಮಾರ ಸ್ವಾಮೀಜಿಗಳ ಪುತ್ಥಳಿ ಶಿಲನ್ಯಾಸ ಕಾರ್ಯಕ್ರಮದಲ್ಲಿ ಸಿಎಂ ಬಿಎಸ್ ವೈ ಹೇಳಿಕೆ…

ರಾಮನಗರ,ನ,8,2019(www.justkannada.in):  ಸಿದ್ಧಗಂಗಾ ಶ್ರೀ ಶಿವಕುಮಾರಸ್ವಾಮೀಜಿಗಳ ಹುಟ್ಟೂರು ವೀರಾಪುರ ಗ್ರಾಮ ಪ್ರವಾಸಿ ಕೇಂದ್ರವಾಗಿ ಮಾರ್ಪಾಡಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.

ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ವೀರಾಪುರದಲ್ಲಿ ಶ್ರೀ ಶಿವಕುಮಾರ ಮಹಾಸ್ವಾಮಿಗಳ 111 ಅಡಿ ಎತ್ತರದ ಪ್ರತಿಮೆ ಸ್ಥಾಪನೆಗೆ ಹಾಗೂ ವಿವಿಧ ಗ್ರಾಮಾಭಿವೃದ್ಧಿ ಕಾಮಗಾರಿಗಳಿಗೆ ಇಂದು ಮುಖ್ಯಮಂತ್ರಿಗಳಾದ. ಬಿ.ಎಸ್.ಯಡಿಯೂರಪ್ಪ ಅವರು ಶಂಕುಸ್ಥಾಪನೆ ನೆರವೇರಿಸುದರು.  ಈ ಸಂದರ್ಭದಲ್ಲಿ ಸಿದ್ದಗಂಗಾ ಮಠಾದ್ಯಕ್ಷರಾದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು, ಉಪ ಮುಖ್ಯಮಂತ್ರಿ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಶ್ವತ್ಥ ನಾರಾಯಣ್ ಸೇರಿ ಹಲವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಈ ದಿನ ನನ್ನ ಪಾಲಿಗೆ ಅವಿಸ್ಮರಣೀಯ ದಿನ. ಶ್ರೀಗಳ ಹುಟ್ಟೂರಿನಲ್ಲಿರುವ ನೀವೆಲ್ಲರೂ ಧನ್ಯರು. ಶಿವ ಕುಮಾರಶ್ರೀಗಳು ದೇಶಕ್ಕೆ ಮಾದರಿಯಾಗುವಂತಹ ಕೆಲಸವನ್ನ ಮಾಡಿದ್ದಾರೆ. ಪಕ್ಷಬೇಧ ಮರೆತು ಎಲ್ಲರೂ ಕಾರ್ಯಕ್ರಮದಲ್ಲಿ ಸೇರಿಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ವೀರಾಪುರ ಗ್ರಾಮ ಪ್ರವಾಸಿ ಕೇಂದ್ರವಾಗಿ ಮಾರ್ಪಾಡಲಿದೆ.  ಸರ್ದಾರ್ ಪಟೇಲ್ ಅವರ ಪುತ್ಥಳಿ ಮಾದರಿಯಲ್ಲಿ ಇದು ಆಗಲಿದೆ. ಎರಡು ವರ್ಷಗಳಲ್ಲಿ  ಪುತ್ಥಳಿ ನಿರ್ಮಾಣ ಕಾಮಗಾರಿ ಮುಗಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Key words: ramanagar- Veerapur a-CM BS yeddyurappa-Shri Sivakumara Swamiji’s- statue- Program

.