ರಮೇಶ್ ಜಾರಕಿಹೊಳಿ ಸಿಡಿ ವಿಚಾರ:  ಈಗಲೇ ಏನನ್ನೂ ಹೇಳುವಂತಿಲ್ಲ-ಸಚಿವ ಜಗದೀಶ್ ಶೆಟ್ಟರ್…

kannada t-shirts

ಮೈಸೂರು,ಮಾರ್ಚ್,3,2021(www.justkannada.in): ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ಈ ಬಗ್ಗೆ  ಈಗಲೇ ಏನನ್ನೂ ಹೇಳುವಂತಿಲ್ಲ ಎಂದು ಹೇಳಿದ್ದಾರೆ. jk

ಈ ಕುರಿತು ಇಂದು ಮೈಸೂರಿನಲ್ಲಿ ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್,  ರಮೇಶ್ ಜಾರಕಿಹೊಳಿ ಈ ವಿಚಾರದಲ್ಲಿ ನನ್ನ ಪಾತ್ರ ಏನೂ ಇಲ್ಲ ಅಂತ ಹೇಳಿದ್ದಾರೆ. ಈ ಬಗ್ಗೆ ಸಮಗ್ರವಾಗಿ ತನಿಖೆಯಾಗಲಿ. ಸತ್ಯಾಸತ್ಯತೆ ಏನು ಅಂತ ಗೊತ್ತಾಗಲಿ‌. ಆ ಮೇಲೆ ಪ್ರತಿಕ್ರಿಯೆ ನೀಡಬಹುದು‌ ಎಂದರು. Ramesh jarakiiholi- CD- issue-mysore- Minister- Jagdish Shetter-reaction

ಇಂದು ಕ್ಯಾಬಿನೆಟ್ ಮೀಟಿಂಗ್ ಇದೆ. ಅವರು ಬರ್ತಾರಾ ಸಿಎಂ ಭೇಟಿ ಮಾಡ್ತಾರ ಅಂತ ನೋಡುತ್ತೇವೆ. ಈ ವಿಚಾರದ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುತ್ತೇವೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.

Key words: Ramesh jarakiiholi- CD- issue-mysore- Minister- Jagdish Shetter-reaction

website developers in mysore