ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಸಂತ್ರಸ್ತ ಯುವತಿಗೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರಿಂದ ನೋಟಿಸ್

Promotion

ಬೆಂಗಳೂರು, ಮಾಚ್‍ 14, 2021 (www.justkannada.in): ಸಂತ್ರಸ್ತ ಯುವತಿಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ವಿಡಿಯೋ ಬಿಡುಗಡೆ ಮಾಡಿದ್ದ ಯುವತಿ ತನಗೆ ಹಾಗೂ ತನ್ನ ಕುಟುಂಬಕ್ಕೆ ಜೀವ ಬೆದರಿಕೆಯಿದೆ. ರಕ್ಷಣೆ ನೀಡುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಳು.

ಈಗ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಯುವತಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಯುವತಿ ವಾಸವಾಗಿದ್ದ ಮನೆ ಹಾಗೂ ಆಕೆಯ ಸ್ನೇಹಿತರಿಗೂ ಪೊಲೀಸರು ನೋಟಿಸ್ ನೀಡಿದ್ದಾರೆ.