ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ರಮೇಶ್ ಕತ್ತಿ ಆಯ್ಕೆ…

ಬೆಳಗಾವಿ,ನವೆಂಬರ್,14,2020(www.justkannada.in): ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಡಿಸಿಸಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಇಂದು ನಡೆಯಿತು. ರಮೇಶ ಕತ್ತಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷ ಸುಭಾಷ ಢವಳೇಶ್ವರ ಅವಿರೋಧವಾಗಿ ಆಯ್ಕೆಯಾದರು.kannada-journalist-media-fourth-estate-under-loss

ರಾಜ್ಯದ ಪ್ರತಿಷ್ಠಿತ ಬ್ಯಾಂಕ್‍ಗಳಲ್ಲಿ ಬೆಳಗಾವಿಯ ಡಿಸಿಸಿ ಬ್ಯಾಂಕ್ ಕೂಡ ಒಂದಾಗಿದೆ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಭಾರೀ ವಿರೋಧಗಳು ವ್ಯಕ್ತವಾಗಿದ್ದವು. ಇದರ ನಡುವೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ರಮೇಶ್ ಕತ್ತಿ ಮತ್ತು ಉಪಾಧ್ಯಕ್ಷರಾಗಿ ಸುಭಾಷ್ ಢವಳೇಶ್ವರ ಆಯ್ಕೆಯಾಗಿದ್ದಾರೆ. Ramesh katti-elected –belagavi-DCC Bank- President

ಈ ಬಗ್ಗೆ ಚುನಾವಣಾಧಿಕಾರಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ರಮೇಶ್ ಕತ್ತಿ ಮೂರನೇ ಬಾರಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

Key words: Ramesh katti-elected –belagavi-DCC Bank- President