“ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ, ವಿಚಾರಣೆಗೆ ಹಾಜರಾಗುವಂತೆ ಸಂತ್ರಸ್ತ ಯುವತಿಗೆ ನೋಟಿಸ್”

ಬೆಂಗಳೂರು,ಮಾರ್ಚ್,14,2021(www.justkannada.in) : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.jkಸಿಡಿ ಪ್ರಕರಣದ ಬಗ್ಗೆ ರಮೇಶ್ ಜಾರಕಿಹೊಳಿ ನಿನ್ನೆ ದೂರು ದಾಖಲಿಸಿದ ಬೆನ್ನಲ್ಲೇ ಪ್ರತ್ಯಕ್ಷವಾದ ಯುವತಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಳು. ತನಗೆ ಹಾಗೂ ತನ್ನ ಕುಟುಂಬಕ್ಕೆ ಜೀವ ಬೆದರಿಕೆಯಿದೆ. ರಕ್ಷಣೆ ನೀಡುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಳು. ಅಲ್ಲದೇ ತನಗೆ ಹಾಗೂ ತನ್ನ ಕುಟುಂಬಕ್ಕೆ ಆಗುತ್ತಿರುವ ತೊಂದರೆಗಳನ್ನು ವಿವರಿಸಿದ್ದಳು.

ಈ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಯುವತಿ ಹಾಗೂ ಆಕೆ ಕುಟುಂಬಕ್ಕೆ ಜೀವಭಯವಿರುವುದು ಗಮನಕ್ಕೆ ಬಂದಿದೆ. ಸೂಕ್ತ ರಕ್ಷಣೆ ನೀಡುವಂತೆ ಎಸ್ ಐ‌ ಟಿಗೆ ಸೂಚಿಸಲಾಗಿದೆ ಎಂದಿದ್ದಾರೆ. ಇದರ ಬೆನ್ನಲ್ಲೇ ಈಗ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಯುವತಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.Ramesh Zaraki Holly,CD case,attend,hearing,victims,young,woman,Notice 

ಯುವತಿ ವಾಸವಾಗಿದ್ದ ಮನೆ ಹಾಗೂ ಆಕೆಯ ಸ್ನೇಹಿತರಿಗೂ ಪೊಲೀಸರು ನೋಟಿಸ್ ತಲುಪಿಸಿದ್ದು, ವಿಚಾರಣೆಗೆ ಯುವತಿ ಹಾಜರಾಗಲಿದ್ದಾರಾ ಕಾದು‌ ನೋಡಬೇಕಿದೆ.

key words : Ramesh Zaraki Holly-CD case-attend-hearing-victims-young-woman-Notice