ದಚ್ಚುಗೆ ಜೋಡಿ ಆಗ್ತಾರಾ ಮೋಹಕ ತಾರೆ ರಮ್ಯಾ

Promotion

ಬೆಂಗಳೂರು, ಆಗಸ್ಟ್31 2020 (www.justkannada.in): ದರ್ಶನ್ ಸಿನಿಮಾದಲ್ಲಿ ನಟಿಸುವ ಮೂಲಕ ಅವರು ಸ್ಯಾಂಡಲ್ ವುಡ್ ಗೆ ರೀ ಎಂಟ್ರಿ ನೀಡಲಿದ್ದಾರೆ ಎನ್ನಲಾಗುತ್ತಿದೆ.

ರಾಕ್ ಲೈನ್ ವೆಂಕಟೇಶ್ ನಿರ್ಮಿಸುತ್ತಿರುವ, ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ರಾಜವೀರ ಮದಕರಿ ನಾಯಕ ಚಿತ್ರದಲ್ಲಿ ರಮ್ಯಾ ಮರಳುವರು ಎಂದು ಮೂಲಗಳು ಹೇಳಿವೆ. ಆದರೆ ಇದರ ಬಗ್ಗೆ ಅಧಿಕೃತವಾಗಿ ಯಾವುದೇ ಪ್ರಕಟಣೆ ಆಗಿಲ್ಲ.

ಈ ಮೂಲಕ ಮಾಜಿ ಸಂಸದೆ, ಕಾಂಗ್ರೆಸ್ ನಾಯಕಿ ನಟಿ ರಮ್ಯಾ ಸ್ಯಾಂಡಲ್ ವುಡ್ ಗೆ ಮರಳಲು ತಯಾರಿ ನಡೆಸಿದ್ದಾರೆ ಎಂಬ ಸುದ್ದಿಗೆ ಹೆಚ್ಚಿನ ಮಹತ್ವ ಬರುತ್ತಿದೆ.