ಚಿರಂಜೀವಿ ಸರ್ಜಾ ನಿಧನಕ್ಕೆ ಕಂಬನಿ ಮಿಡಿದ ರಮ್ಯಾ

Promotion

ಬೆಂಗಳೂರು, ಜೂನ್ 08, 2020 (www.justkannada.in): ನಟಿ, ಮಾಜಿ ಸಂಸದೆ ರಮ್ಯಾ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದಾರೆ.

ಫೇಸ್ ಬುಕ್ ನಲ್ಲಿ ಚಿರಂಜೀವಿ ಸರ್ಜಾ ಹಠಾತ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅದ್ಭುತ ಸಹನಟನಾಗಿ ಚಿರಂಜೀವಿ ಅವರನ್ನು ನೆನಪಿಸಿಕೊಳ್ಳುತ್ತೇನೆ. ಯಾವಾಗಲೂ ಉತ್ಸಾಹದಿಂದ ಇರುತ್ತಿದ್ದ ಅವರು ಪಾಸಿಟಿವ್ ಆಟಿಟ್ಯೂಡ್ ಹೊಂದಿದ್ದರು ಎಂದು ರಮ್ಯಾ ಬರೆದುಕೊಂಡಿದ್ದಾರೆ.

ಅವರ ಅಗಲುವಿಕೆಯನ್ನು ಸಹಿಸಿಕೊಳ್ಳುವ ಶಕ್ತಿ ಅವರಿಗೆ ಸಿಗಲಿದೆ ಎಂದು ಭರವಸೆ ಹೊಂದಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ರಮ್ಯಾ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.