ಮುಂದಿನ ಸಿಎಂ ಬಗ್ಗೆ ಹೇಳಿಕೆ ನೀಡದಂತೆ ‘ಕೈ’ ನಾಯಕರಿಗೆ ರಣದೀಪ್ ಸುರ್ಜೇವಾಲ ಸೂಚನೆ.

Promotion

ನವದೆಹಲಿ,ಜೂನ್,21,2021(www.justkannada.in): ಮುಂದಿನ ಸಿಎಂ ಬಗ್ಗೆ ಹೇಳಿಕೆ ನೀಡದಂತೆ ಕಾಂಗ್ರೆಸ್ ನಾಯಕರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಖಡಕ್ ಸೂಚನೆ ನೀಡಿದ್ದಾರೆ.jk

ಭಾವಿ ಸಿಎಂ ಸಿದ್ಧರಾಮಯ್ಯ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದ್ದರು. ಅಲ್ಲದೆ ನಿನ್ನೆಯಷ್ಟೆ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್ ಸಹ ಸಿದ್ಧರಾಮಯ್ಯ ಮುಂದಿನ ಸಿಎಂ ಎಂದು ಹೇಳಿದ್ದರು. ಇದಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಹೈಕಮಾಂಡ್ ಮುಂದೆ ಬಂದಿದ್ದು ಈ ಬಗ್ಗೆ ಹೇಳಿಕೆ ನೀಡದಂತೆ ಸೂಚನೆ ನೀಡಿದೆ.

ಕರ್ನಾಟಕ ಅಭಿವೃದ್ದಿಗೆ ಬಿಜೆಪಿ ಮಾರಕ. ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೋರಾಡುತ್ತಿದೆ. ಈ ಸಂದರ್ಭದಲ್ಲಿ ಸಿಎಂ ಅಭ್ಯರ್ಥಿ ಬಗ್ಗೆ ಮಾತನಾಡಬಾರದು.  ಈ ಸಂದರ್ಭದಲ್ಲಿ ಸಿಎಂ ಅಭ್ಯರ್ಥಿ ಹೇಳಬಾರದು ಎಂದು ರಣದೀಪ್ ಸುರ್ಜೇವಾಲ ತಿಳಿಸಿದ್ದಾರೆ.

Key words: Randeep Surjewala- instructs -Congress leaders -not -comment – CM