ಮಾಜಿ ಸಚಿವ ಜನಾರ್ದನ ರೆಡ್ಡಿ ಪುತ್ರನ ಚಿತ್ರದಲ್ಲಿ ರವಿಚಂದ್ರನ್, ಜೆನಿಲಿಯಾ-ರಿತೇಶ್, ಶ್ರೀಲೀಲಾ!

Promotion

ಬೆಂಗಳೂರು, ಮಾರ್ಚ್ 05, 2022 (www.justkannada.in): ಎಸ್.ಎಸ್.ರಾಜಮೌಳಿ ಅವರು ಮಾಜಿ ಸಚಿವ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಚೊಚ್ಚಲ ಚಿತ್ರಕ್ಕೆ ಚಾಲನೆ ನೀಡಿದ್ದಾರೆ.

ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್ ಮುಖ್, ಶ್ರೀಲೀಲಾ ಸೇರಿದಂತೆ ದೊಡ್ಡ ತಾರಾಬಳಗವೇ ನಟಿಸಲಿರುವ ಈ ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನೆರವೇರಿದೆ.

ಶಿವರಾಜ್ ಕುಮಾರ್ ನಟನೆಯ ‘ಸತ್ಯ್ ಇನ್ ಲವ್’ ಸಿನಿಮಾದಲ್ಲಿ ನಟಿಸಿದ್ದ ಜೆನೀಲಿಯಾ ಮತ್ತೆ ಸ್ಯಾಂಡಲ್‍ವುಡ್‍ಗೆ ಮರಳಿದ್ದಾರೆ. ವಿವಾಹದ ಬಳಿಕ ಚಿತ್ರರಂಗದಿಂದ ದೂರ ಉಳಿದಿದ್ದ ಜೆನೀಲಿಯಾ 14 ವರ್ಷಗಳ ಬಳಿಕ ನಟನೆಗೆ ಹಿಂದಿರುಗಿದ್ದಾರೆ.

14 ವರ್ಷಗಳ ಬಳಿಕ ಮತ್ತೆ ನಟನೆಗೆ ಮರಳುತ್ತಿದ್ದೇನೆ. ಇದು ತುಂಬಾನೇ ಸ್ಪೆಷಲ್ ಪ್ರಾಜೆಕ್ಟ್. ಈ ಸಿನಿಮಾ ಪೂರ್ತಿ ನಾವು ಇರುತ್ತೇವೆ ಎಂದು ತಿಳಿಸಿದ್ದಾರೆ. ಕಿರೀಟಿ ಸಿನಿಮಾದ ಮುಹೂರ್ತದ ವೇಳೆ ಹೀರೋ ಇಂಟ್ರೂಡಕ್ಷನ್ ಟೀಸರ್ ರಿಲೀಸ್ ಮಾಡಲಾಯಿತು.