2ನೇ ಮ್ಯಾಚ್’ಗೆ ಫ್ಯಾನ್ಸ್ ರೆಡಿ! ಇಂದು ನೈಟ್ ರೈಡರ್ಸ್-ಆರ್’ಸಿಬಿ ಬಿಗ್ ಫೈಟ್

Promotion

ಬೆಂಗಳೂರು, ಮಾರ್ಚ್ 30, 2022 (www.justkannada.in): ಇಂದು ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ.

ಹೌದು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂದು ಅಂದರೆ ಮಾರ್ಚ್ 30ರ ಬುಧವಾರದಂದು ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ.

ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಎರಡೂ ತಂಡಗಳು ಟೂರ್ನಿಯಲ್ಲಿ ಸಂಪೂರ್ಣ ವಿಭಿನ್ನ ಆರಂಭ ಪಡೆದಿದ್ದು, ಇಂದಿನ ಪಂದ್ಯ ಕುತೂಹಲ ಮೂಡಿಸಿದೆ.

ಆರ್​ಸಿಬಿ ಬ್ಯಾಟಿಂಗ್ ವಿಭಾಗದಲ್ಲಿ ಬಲಿಷ್ಠವಾಗಿದೆ. ಮೊದಲ ಪಂದ್ಯದಲ್ಲಿ ಫಾಫ್ ಕಪ್ತಾನನ ಆಟವಾಡಿದ್ದರು. ವಿರಾಟ್ ಕೊಹ್ಲಿ ಕೂಡ ಫಾರ್ಮ್​ಗೆ ಮರಳಿದ್ದು, ತಂಡದ ಆತ್ಮವಿಶ್ವಾಸ ಹೆಚ್ಚಿಸಿದೆ.