ಉಪಚುನಾವಣೆ ಬಳಿಕ ರಾಜ್ಯದಲ್ಲಿ ಮತ್ತೆ ಎಲೆಕ್ಷನ್: ಭವಿಷ್ಯ ನುಡಿದ ಜಮೀರ್

Promotion

ಬೆಂಗಳೂರು,ಅಕ್ಟೋಬರ್,29,2020 : ಬಿಜೆಪಿಯಲ್ಲಿ ಆಗುತ್ತಿರುವ ಬೆಳವಣಿಗೆ ನೋಡಿದರೆ ಉಪಚುನಾವಣೆಯ ನಂತರ ಮತ್ತೆ ಚುನಾವಣೆ ಬರುವ ಸಾಧ್ಯತೆ ಕಂಡು ಬರುತ್ತಿದೆ ಎಂದು ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.

ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳ ಉಪಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಆಗಬಹುದು. ಮತ್ತೆ ಚುನಾವಣೆ ಬರಬಹುದು ಎಂದಿದ್ದಾರೆ.

ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಬೇಕು ಎನ್ನುವುದು ಜನರ ಅಭಿಪ್ರಾಯ. ನನ್ನ ವೈಯಕ್ತಿಕ ಅಭಿಪ್ರಾಯ ಕೂಡ ಹೌದು. ಸಿದ್ದರಾಮಯ್ಯ ಸಿಎಂ ಆಗಲಿ ಎಂಬ ಜ‌ನರ ಅಭಿಪ್ರಾಯವನ್ನ ನಾನು ಹೇಳಿದ್ದೇನೆ. ಆದರೆ, ಕಾಂಗ್ರೆಸ್ ನಲ್ಲಿ ಹೈಕಮಾಂಡ್ ಸಿಎಂ ಯಾರಾಗಬೇಕು ಎಂಬುದನ್ನ ನಿರ್ಧರಿಸುತ್ತದೆ ಎಂದರು.

ಶಿಸ್ತುಕ್ರಮದ ನೋಟಿಸ್ ಕೊಟ್ಟರೆ ಅದಕ್ಕೆ ಉತ್ತರಿಸುತ್ತೇನೆ

ಸಿದ್ದರಾಮಯ್ಯ ಸಿಎಂ ಆಗಬೇಕು ಎಂಬ ನನ್ನ ಹೇಳಿಕೆ ಪಕ್ಷ ವಿರೋಧಿ ಚಟುವಟಿಕೆ ಆಗುವುದಿಲ್ಲ. ಒಂದು ವೇಳೆ ನನಗೆ ಶಿಸ್ತುಕ್ರಮದ ನೋಟಿಸ್ ಕೊಟ್ಟರೆ ಅದಕ್ಕೆ ಉತ್ತರಿಸುತ್ತೇನೆ ಎಂದು ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.