ಮಳೆಹಾನಿ ನಷ್ಟದ ವರದಿ ಬಂದ ಬಳಿಕ ಕೇಂದ್ರಕ್ಕೆ ಪರಿಹಾರ ಕೇಳುವ ಬಗ್ಗೆ ತೀರ್ಮಾನ-ಸಿಎಂ ಬಸವರಾಜ ಬೊಮ್ಮಾಯಿ.

kannada t-shirts

ಮೈಸೂರು,ಜುಲೈ,12,2022(www.justkannada.in): ರಾಜ್ಯದಲ್ಲಿ ಮಳೆಹಾನಿಗೆ ಸಂಬಂಧಿಸಿದಂತೆ ಇಂದು ಸಂಜೆಯೊಳಗೆ ಮೊದಲ ಹಂತದ ನಷ್ಟದ ಅಧಿಕೃತ ಅಂಕಿ ಅಂಶ ಬಿಡುಗಡೆಯಾಗಲಿದೆ. ನಷ್ಟದ ವರದಿ ಬಂದ ಮೇಲೆ ಕೇಂದ್ರಕ್ಕೆ ಪರಿಹಾರ ಕೇಳುವ ವಿಚಾರದಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಳೆಹಾನಿ ಪ್ರದೇಶಗಳ ಪರಿಶೀಲನೆ ಹಿನ್ನೆಲೆ ಇಂದು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಿದರು. ಮೈಸೂರಿನಿಂದ ರಸ್ತೆಯ ಮೂಲಕ ಕೊಡಗು ಜಿಲ್ಲೆಯತ್ತ ಪ್ರಯಾಣ ಬೆಳೆಸಿದರು. ಸಿಎಂಗೆ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸಾಥ್ ನೀಡಿದರು.

ಇದಕ್ಕೂ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸದ್ಯಕ್ಕೆ 750 ಕೋಟಿ ರೂ. ಎನ್ ಡಿಆರ್ ಎಫ್ ಹಣ ನಮ್ಮಲ್ಲಿ ಇದೆ. ಅನೇಕ ಕಡೆಗಳಲ್ಲಿ ಭೂಮಿ ಕುಸಿತವಾಗಿದೆ. ರಸ್ತೆಗಳು ಹಾಳಾಗಿದೆ, ಮನೆ ಹಾನಿ ಪ್ರಾಣ ಹಾನಿಯೂ ಉಂಟಾಗಿದೆ. ಎಲ್ಲದರ ಬಗ್ಗೆ ವರದಿ ಸಿದ್ಧವಾಗುತ್ತಿದೆ. ಸಂಜೆಯೊಳಗಡೆ ಅಧಿಕೃತ ಮಾಹಿತಿ ಪ್ರಕಟಿಸುತ್ತೇವೆ ಎಂದು ತಿಳಿಸಿದರು.

ಉಸ್ತುವಾರಿ ಸಚಿವರು ಜಿಲ್ಲೆಗಳಿಗೆ ಹೋಗ್ತಿಲ್ಲ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದ ಸಿಎಂ ಬಸವರಾಜ ಬೊಮ್ಮಾಯಿ,  ಇಡೀ ರಾಜ್ಯ ಸರ್ಕಾರ ರಸ್ತೆಗಿಳಿದು ಕೆಲಸ ಮಾಡುತ್ತಿದೆ. ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ತಮ್ಮ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ನೆರೆ ಹಾನಿ ಪ್ರದೇಶಕ್ಕೆ ಹೋಗುತ್ತಿಲ್ಲ ಎಂಬುದು ಸುಳ್ಳು. ನನ್ನ ಹಾದಿಯಾಗಿ ಎಲ್ಲಾ ಸಚಿವರುಗಳು ಕೆಲಸ ಮಾಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.

ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆ: ಒಂದುವರೆ ವರ್ಷ ಪೂರೈಸಿರುವ ಅಧ್ಯಕ್ಷರುಗಳ ರಾಜೀನಾಮೆ ಸೂಚನೆ.

ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಆರು ತಿಂಗಳ ಹಿಂದೆಯೇ ಅಧ್ಯಕ್ಷರ ಬದಲಾವಣೆಗೆ ಕೋರ್ ಕಮಿಟಿಯಲ್ಲಿ ತೀರ್ಮಾನ ಮಾಡಿದ್ದೇವೆ. ಒಂದುವರೆ ವರ್ಷ ಪೂರೈಸಿರುವ ಅಧ್ಯಕ್ಷರಗಳ ರಾಜೀನಾಮೆಗೆ ಸೂಚನೆ ನೀಡಿದ್ದೇವೆ. ಒಂದುವರೆ ವರ್ಷ ಅಧಿಕಾರಿ ಪೂರೈಸಿರುವವರ ಪಟ್ಟಿ ತಯಾರಿಸಿದ್ದೇವೆ. ಶೀಘ್ರದಲ್ಲೇ ಅದರ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದರು.

ಬೆಂಗಳೂರಿನ ಚಾಮರಾಜಪೇಟೆ ಬಂದ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಆ ವಿಚಾರವನ್ನ ಸ್ಥಳೀಯ ಅಧಿಕಾರಿಗಳೇ ನೋಡಿಕೊಳ್ಳುತ್ತಾರೆ ಎಂದರು.

Key words: receiving -report -rain damage- compensation – Centre-CM Basavaraja Bommai.

website developers in mysore