ಶೀಘ್ರವೇ 20 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

Promotion

ಬೆಂಗಳೂರು, ಅಕ್ಟೋಬರ್ 22, 2023 (www.justkannada.in): ಶೀಘ್ರವೇ 20 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಚಿವ ಮಧು ಬಂಗಾರಪ್ಪ ಸಿಹಿ ಸುದ್ದಿ ನೀಡಿದ್ದು, ಶೀಘ್ರದಲ್ಲೇ 20,000 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಎರಡೂವರೆ ವರ್ಷದ ಬಳಿಕ ಸಿಎಂ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ. ನಾವೆಲ್ಲರೂ ಹೈಕಮಾಂಡ್ ಆದೇಶ ಪಾಲಿಸಬೇಕು ಎಂದಿದ್ದಾರೆ.

ರಾಜ್ಯ ಸರ್ಕಾರ ಪತನವಾಗಲಿದೆ ಎಂದು ವಿಪಕ್ಷಗಳು ಹೇಳುತ್ತಿವೆ ಅಷ್ಟೇ. ಸರ್ಕಾರ ಯಾವುದೇ ಕಾರಣಕ್ಕೂ ಪತನವಾಗಲ್ಲ, ಸರ್ಕಾರ ಸುಭದ್ರವಾಗಿರಲಿದೆ. ಜನ ಕಾಂಗ್ರೆಸ್ ಪಕ್ಷಕ್ಕೆ ತುಂಬು ಬಲ ನೀಡಿದ್ದಾರೆ ಎಂದು ತಿಳಿಸಿದ್ದಾರೆ.