ಸೋರಿಕೆ ತಡೆದು ಸಾರಿಗೆ ಇಲಾಖೆ ನಷ್ಟ ಸರಿಪಡಿಸಲು ಯತ್ನ-ಡಿಸಿಎಂ ಲಕ್ಷ್ಮಣ್ ಸವದಿ ಹೇಳಿಕೆ…

ಹುಬ್ಬಳ್ಳಿ,ಆ,30,2019(www.justkannada.in): ಸಾರಿಗೆ ಇಲಾಖೆ ನಷ್ಟ ಅನುಭವಿಸುತ್ತಿದ್ದು ಸೋರಿಕೆ ತಡೆದು ನಷ್ಟ ಸರಿಪಡಿಸಲು ಪ್ರಯತ್ನ ಮಾಡಲಾಗುತ್ತದೆ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದರು.

ಹುಬ್ಬಳ್ಳಿಯಲ್ಲಿ  ಇಂದು ಮಾತನಾಡಿದ ಡಿಸಿಎಂ ಲಕ್ಷ್ಮಣ‌ ಸವದಿ, ಸಿಬ್ಬಂದಿಗೆ ಕಟ್ಟುನಿಟ್ಟಾಗಿ ಜೇಷ್ಠತೆ ಆಧಾರದ ಮೇಲೆಯೇ ಬಡ್ತಿ ನೀಡಲಾಗುವುದು. ಸಾರಿಗೆ ಇಲಾಖೆಯಲ್ಲಿ ಆಗುತ್ತಿರುವ ನಷ್ಟ ಸರಿಪಡಿಸುತ್ತೇವೆ ಎಂದು ತಿಳಿಸಿದರು.

ಹಾಗೆಯೇ ತಮಗೆ ಡಿಸಿಎಂ ಸ್ಥಾನ ನೀಡಿದ್ದಕ್ಕೆ ಸಿದ್ಧರಾಮಯ್ಯ ಟೀಕೆ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಲಕ್ಷ್ಮಣ್ ಸವದಿ, ಸಿದ್ದರಾಮಯ್ಯ ಹೇಳಿಕೆಗೆ ನಾನು ಪ್ರತಿಕ್ರಿಯಿಸಲ್ಲ. ಪಕ್ಷ ಕೊಟ್ಟಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ನೆರೆ ಪರಿಹಾರಕ್ಕೆ ನಿನ್ನೆಯಷ್ಟೆ ಪ್ರಸ್ತಾವ ಕಳಿಸಿದ್ದೇವೆ. ಕೇಂದ್ರ ತಂಡ ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ ನಡೆಸಿದೆ. ಕೇಂದ್ರ ಸರ್ಕಾರ‌‌ ಆದಷ್ಟು ಬೇಗ ಪರಿಹಾರ ಬಿಡುಗಡೆ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಇಡಿ ಸಮನ್ಸ್ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಲಕ್ಷ್ಮಣ್ ಸವದಿ, ಡಿ.ಕೆ. ಶಿವಕುಮಾರ್ ವಿರುದ್ಧ‌ ಇಡಿ ಕ್ರಮ ರಾಜಕೀಯ ಪ್ರೇರಿತವಲ್ಲ. ಇಡಿಯವರು ತಮ್ಮ ಕೆಲಸ ಮಾಡುತ್ತಿದ್ದಾರೆ ಎಂದರು.

Key words: rectify- loss- transport department-DCM- Laxman Savadi -hubli