ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ರೆಟ್ ಅಲರ್ಟ್ ಘೋಷಣೆ: ಸಾರ್ವಜನಿಕರು ಅತಂಕ ಪಡುವ ಅಗತ್ಯವಿಲ್ಲ ಎಂದ ಪೊಲೀಸ್ ಆಯುಕ್ತ ಭಾಸ್ಕರ್ ರಾವ್…

ಬೆಂಗಳೂರು,ಜ,20,2020(www.justkannada.in): ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಪತ್ತೆಯಾದ ಬೆನ್ನಲ್ಲೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಭದ್ರತೆ ಹೆಚ್ಚಸಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಹಿನ್ನೆಲೆ, ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದು   ಏರ್ ಪೋರ್ಟ್ ಗೆ ಆಗಮಿಸುವ ವಾಹನಗಳಲ್ಲಿ  ಎಲ್ಲಾ ಗೇಟ್ ಗಳಲ್ಲಿ ತಪಾಸಣೆ ಮಾಡಲಾಗುತ್ತಿದೆ.

ನಗರದ ಭದ್ರತೆ ಬಗ್ಗೆ ಪ್ರತಿಕ್ರಿಯಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್,  ನಗರದಲ್ಲಿ ಎಲ್ಲಾ ರೀತಿಯ ಅಗತ್ಯ ಭದ್ರತೆ ಕೈಗೊಳ್ಳಲಾಗಿದೆ. ಬೆಂಗಳೂರಿಗರು ಆತಂಕಪಡುವ ಅಗತ್ಯವಿಲ್ಲ.  ಏರ್ ಪೋರ್ಟ್ ಗೆ ಕೆಐಎಎಲ್ ಗೆ ಕೇಂದ್ರಿಯ ಭದ್ರತಾ ಪಡೆಯ ಭದ್ರತೆ ಇದೆ ಎಂದು ತಿಳಿಸಿದ್ದಾರೆ.

ಇನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್ ಘೋಷಿಸಲಾಗಿದ್ದು , ಪೊಲೀಸ್ ಆಯುಕ್ತ ಆರ್.ದಿಲೀಪ್ ಭೇಟಿ  ನೀಡಿ ಪರಿಶಿಲನೆ ನಡೆಸಿದ್ದಾರೆ. ಮಾಧ್ಯಮಗಳಿಗೆ ಮಾತನಾಡಿರುವ ಪೊಲೀಸ್ ಆಯುಕ್ತ ದಿಲೀಪ್ ಅವರು, ಹುಬ್ಬಳ್ಳಿ  ನಿಲ್ದಾಣಕ್ಕೆ ಅಗತ್ಯ ಭದ್ರತೆ ಹೆಚ್ಚಿಸಿದ್ದೆವೆ  ಭದ್ರತೆ ಸಂಬಂಧ ಏರ್ ಪೋರ್ಟ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ ಮೇಲಾಧಿಕಾರಿಗಳ ಸಲಹೆ ಪಡೆದು ಭದ್ರತೆ ಹೆಚ್ಚಿಸಿದ್ದೇವೆ ಎಂದು ತಿಳಿಸಿದರು.

Key words: Red Alert -Declaration – Kempegowda Airport- Bangalore