ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು- ಸಭೆಯಲ್ಲಿ ನಿರ್ಣಯ..

ಬೆಂಗಳೂರು,ಅಕ್ಟೋಬರ್,11,2020(www.justkannada.in) : ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಕುರುಬರನ್ನು  ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತು ಚುನಾಯಿತ ಪ್ರತಿನಿಧಿಗಳ ಸಭೆ ನಡೆಯಿತು.kurubas community-Scheduled-Tribe-Meeting- under-leadership-Niranjananandpuri Swamiji

ಬೆಂಗಳೂರಿನ ಅರಮನೆ ಆವರಣದಲ್ಲಿರುವ ಗಾಯತ್ರೀ ವಿಹಾರದಲ್ಲಿ  ಕುರುಬರ ಎಸ್.ಟಿ ಹೋರಾಟ ಸಮಿತಿ ಕರ್ನಾಟಕ , ಕಾಗಿನೆಲೆ ಕನಕ ಗುರುಪೀಠ ಹಾಗೂ ಕರ್ನಾಟಕ ಪ್ರದೇಶ ಕುರುಬರ ಸಂಘ ಸಂಯುಕ್ತ ಆಶ್ರಯದಲ್ಲಿ ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತು ಚುನಾಯಿತ ಪ್ರತಿನಿಧಿಗಳ ಸಭೆ ನಡೆಸಲಾಯಿತು.

ಸಭೆಯಲ್ಲಿ  ಎಲ್ಲರೂ ಓಕ್ಕಲೂರಿನಿಂದ ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂಬ ನಿರ್ಣಯ ಕೈಗೊಳ್ಳಲಾಯಿತು.kurubas community-Scheduled-Tribe-Meeting- under-leadership-Niranjananandpuri Swamiji

ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಸಿದ್ದರಾಮನಂದಪುರಿ ಸ್ವಾಮೀಜಿ, ಶ್ರೀ ಶಿವಾನಂದಪುರಿ ಸ್ವಾಮೀಜಿ ಸೇರಿದಂತೆ ಹಲ ಸ್ವಾಮೀಜಿಗಳು ಹಾಗೂ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ಸಚಿವ ಕೆ.ಎಸ್.ಈಶ್ವರಪ್ಪ, ಜೆಡಿ ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ, ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್, ಎಂ.ಟಿ.ಬಿ ನಾಗರಾಜ್, ಅರ್.ಶಂಕರ್ ಮಾಜಿ ಸಚಿವ ಹೆಚ್.ಎಂ.ರೇವಣ್ಣ ಸೇರಿದಂತೆ ಕುರುಬ ಸಮಾಜದ ಅನೇಕ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

key words : kurubas community-Scheduled-Tribe-Meeting- under-leadership-Niranjananandpuri Swamiji