ತುಂಗಭದ್ರಾ ಡ್ಯಾಂನಿಂದ ನೀರು ಬಿಡುಗಡೆ: ಹಂಪಿ ಸ್ಮಾರಕಗಳು ಜಲಾವೃತ.

Promotion

ಬಳ್ಳಾರಿ,ಆಗಸ್ಟ್,8,2022(www.justkannada.in):  ಭಾರಿ ಮಳೆ ಹಿನ್ನೆಲೆ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾದ ಹಿನ್ನೆಲೆ ಅಪಾರ ಪ್ರಮಾಣದಲ್ಲಿ ನೀರು ಹೊರ ಬಿಡಲಾಗಿದೆ.

ತುಂಗಭದ್ರಾ ಡ್ಯಾಂನಿಂದ 1 ಲಕ್ಷ 10 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ ಬಿಡುಗಡೆ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ   ಹಂಪಿಸ್ಮಾರಕಗಳು ಜಲಾವೃತವಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಪುರಂದರ ದಾಸರ ಮಂಟಪ, ಧಾರ್ಮಿಕ ವಿಧಿವಿಧಾನ ಮಂಟಪ ಸೇರಿ ಸ್ಮಾರಕಗಳು ಜಲಾವೃತವಾಗಿದೆ.

ಇನ್ನು ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾದ ಹಿನ್ನೆಲೆ ಶ್ರೀರಂಗಪಟ್ಟಣದ ಕೆಆರ್ ಎಸ್ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಕೆಆರ್ ಎಸ್ ಡ್ಯಾಂನಿಂದ 1 ಲಕ್ಷ ಕ್ಯೂಸೆಕ್ ನೀರು ಹೊರಬಿಡಲಾಗಿದೆ.  ಕಾವೇರಿ ನದಿಗೆ ನೀರು ಬಿಟ್ಟ ಹಿನ್ನೆಲೆ ಶ್ರೀರಂಗಪಟ್ಟಣದಲ್ಲಿರುವ ವೆಲ್ಲಸ್ಲಿ ಸೇತುವೆ ಮುಳುಗಡೆ ಅಂಚಿನಲ್ಲಿದ್ದು,  ಸೇತುವೆ ಮೇಲೆ ಭಾರಿ ವಾಹನ  ಸಂಚಾರ ನಿರ್ಬಂಧಿಸಲಾಗಿದೆ.

Key words: Release -water -Tungabhadra Dam-Hampi -monuments – flooded.