ಶಾಲೆಗಳ ಆರಂಭ, ಸರಳ ದಸರಾ ಆಚರಣೆ ಕುರಿತು ಆರೋಗ್ಯ ಸಚಿವ ಶ್ರೀರಾಮುಲು ಪ್ರತಿಕ್ರಿಯಿಸಿದ್ದು ಹೀಗೆ…..

ಮೈಸೂರು,ಅಕ್ಟೋಬರ್,7,2020(www.justkannada.in): ಶಾಲೆಗಳ ಆರಂಭ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲರ ಅಭಿಪ್ರಾಯ ಪಡದು ಇನ್ನೊಂದು ವಾರದಲ್ಲಿ ಶಿಕ್ಷಣ ಇಲಾಖೆಗೆ ವರದಿ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.jk-logo-justkannada-logo

ಅಕ್ಟೋಬರ್ 15 ರಿಂದ ಶಾಲೆಗಳ ಆರಂಭ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾತನಾಡಿದ ಸಚಿವ ಶ್ರೀರಾಮುಲು,  ನನ್ನ ಮೊದಲ ಆದ್ಯತೆ ಮಕ್ಕಳು ,ಪೋಷಕರು ಇಂತಹ ಪರಿಸ್ಥಿತಿಯಲ್ಲಿ ಮಕ್ಕಳು ಪೋಷಕರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಕೆಲಸ ಮಾಡ್ತೀನಿ.  ಶಾಲೆಗಳ ಆರಂಭ ಸಂಬಂಧ ಒಂದು ವಾರದೊಳಗೆ ಅಭಿಪ್ರಾಯ ಸಂಗ್ರಹಿಸಿ ವರದಿ ನೀಡುವಂತೆ ತಜ್ಞರ ಸಮಿತಿ ರಚಿಸಿದ್ದೇವೆ.  ಶಾಲೆಗಳ ಆರಂಭ ಕುರಿತಂತೆ ಇನ್ನೊಂದು ವಾರದೊಳಗೆ ಶಿಕ್ಷಣ ಇಲಾಖೆಗೆ ವರದಿ ನೀಡುತ್ತೇವೆ ಪೋಷಕರು, ಮನಶಾಸ್ತ್ರ ತಜ್ಞರು, ಡಾಕ್ಟರ್‌ಗಳ ಜೊತೆ ಕೌನ್ಸಿಲಿಂಗ್ ಮಾಡಬೇಕಿದೆ. ಹೀಗಾಗಿ ಎಲ್ಲರ ಅಭಿಪ್ರಾಯ ಸದ್ಯದ ಪರಿಸ್ಥಿತಿ ಕುರಿತು ಶಿಕ್ಷಣ ಇಲಾಖೆಗೆ ವರದಿ‌ ನೀಡುತ್ತೇವೆ ಎಂದು ತಿಳಿಸಿದರು.

ದಸರಾ ಆಚರಣೆ ಮತ್ತಷ್ಟು ಕಠಿಣ ಕ್ರಮ….

ಮೈಸೂರು ದಸರಾ ಆಚರಣೆ ಕುರಿತು ಪ್ರತಿಕ್ರಿಯಿಸಿದ ಸಚಿವ ಶ್ರೀರಾಮುಲು, ವಿಶ್ವವಿಖ್ಯಾತ ನಾಡಹಬ್ಬ ದಸರಾ ನಡೆಸುವ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಖ್ಯಮಂತ್ರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮೈಸೂರು ಬೆಂಗಳೂರಿನಲ್ಲಿ ಅತಿ ಹೆಚ್ಚು ಕೊರೋನಾ  ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ಮನಗಂಡು ಸರಳ ಹಾಗೂ ಸಾಂಪ್ರದಾಯಿಕ ದಸರಾ ಮಹೋತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುವುದು. ಇದಕ್ಕಾಗಿ ಮತ್ತಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ ಎಂದರು.report-education-department-within-week-opening-schools-health-minister-sriramulu

ಮೈಸೂರು ಭಾಗದ ಜನಪ್ರತಿನಿಧಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ದಸರಾ ಆಚರಣೆಯ ರೂಪುರೇಷೆ ಸಿದ್ಧಪಡಿಸಲಾಗುವುದು. ದಸರಾ ಮಹೋತ್ಸವದ ಪ್ರವಾಸಿಗರು ಹೆಚ್ಚಾದರೆ ಕೊರೋನಾ ರೋಗಿಗಳ ಸಂಖ್ಯೆ ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ಜನರು ಹಾಗೂ ಕೊರೋನಾ ಹರಡುವಿಕೆಯ ತಡೆಯಲು ಮುಂದಾಗಲಿದ್ದೇವೆ ಎಂದು ಸಚಿವ ಶ್ರೀರಾಮುಲು ತಿಳಿಸಿದರು.

Key words: Report – Education Department- within – week – opening -schools – Health Minister Sriramulu