ಗಣರಾಜ್ಯೋತ್ಸವದ ಕೇಂದ್ರಬಿಂದುವಾಗಲಿರುವ ಕರ್ನಾಟಕದ ‘ ಅನುಭವ ಮಂಟಪ ‘ ಸ್ಥಬ್ದಚಿತ್ರ.

ಬೆಂಗಳೂರು, ಡಿಸೆಂಬರ್ 27 (ಕರ್ನಾಟಕ ವಾರ್ತೆ) ನವದೆಹಲಿಯಲ್ಲಿ ಜನವರಿ 26 ರಂದು ಜರುಗಲಿರುವ 2020 ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಯ್ಕೆಯಾಗಿರುವ ಕರ್ನಾಟಕದ ಅನುಭವ ಮಂಟಪ ಸ್ಥಬ್ಧಚಿತ್ರವು ಈ ಬಾರಿ ಎಲ್ಲರ ಮನೆಸೂರೆಗೊಳ್ಳುವುದು ಬಹುತೇಕ ನಿಶ್ಚಿತವಾಗಿದೆ.

ಭಾರತವು ಸಂವಿಧಾನವನ್ನು ಅಳವಡಿಸಿಕೊಂಡು 70 ವರ್ಷಗಳು ಪೂರ್ಣಗೊಂಡು ಹಾಗೂ ಸ್ವತಂತ್ರ ಗಣರಾಜ್ಯವಾಗಿರುವ ಈ ಸಂದರ್ಭದಲ್ಲಿ ಅನುಭವ ಮಂಟಪ ಸ್ಥಬ್ಧಚಿತ್ರವು ವಿಶೇಷ ಮಹತ್ವ ಪಡೆದಿದೆ. ನವದೆಹಲಿಯ ಗಣರಾಜ್ಯೋತ್ಸವ ಪ್ರದರ್ಶನಕ್ಕೆ ಕರ್ನಾಟಕ ಸ್ಥಬ್ಥಚಿತ್ರವು ಸತತ ಹನ್ನೊಂದನೇ ಬಾರಿಗೆ ಆಯ್ಕೆಗೊಂಡಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಎಸ್.ಎನ್. ಸಿದ್ದರಾಮಪ್ಪ ಅವರು ತಿಳಿಸಿದ್ದಾರೆ.

ಬೀದರ್ ಜಿಲ್ಲೆಯ ಬಸವ ಕಲ್ಯಾಣದಲ್ಲಿ 12 ನೇ ಶತಮಾನದಲ್ಲಿ ಅಸ್ತಿತ್ವಕ್ಕೆ ಬಂದ ಅನುಭವ ಮಂಟಪವು ಸಾಮಾಜಿಕ, ಧಾರ್ಮಿಕ, ಪ್ರಜಾಪ್ರಭುತ್ವದ ನೆಲೆಗಟ್ಟಿನಲ್ಲಿ ಮಾನವ ಸಮಾಜದ ಅಭಿವೃದ್ಧಿಗಾಗಿ ಆಧ್ಯಾತ್ಮಿಕ, ತತ್ವಶಾಸ್ತ್ರ ಆಧಾರದ ಮೇಲೆ ಬಸವೇಶ್ವರರು ಹಾಕಿಕೊಟ್ಟ ಸಮಾನತೆಯ ದೃಷ್ಟಿಕೋನ, ಸೋದರತೆ ಮತ್ತು ಸಹಭಾಗಿತ್ವದ ಹಾದಿಯಲ್ಲಿ ಸಮಾಜದ ಸುಧಾರಕರಾಗಿ ಇಂದಿಗೆ ಒಂಭತ್ತು ಶತಮಾನದ ಹಿಂದೆಯೇ ಸಾಮಾಜಿಕ ದೃಷ್ಟಿಕೋನವುಳ್ಳ ಆ ಮಹಾನ್ ಮಾನವತಾವಾದಿಯ ಸಾಧನೆ ಅಪಾರವಾದದ್ದು.

 

key words : republic.day-delhi-information-deaprtment-basavanna-tablo