2 ತಿಂಗಳೊಳಗೆ ಭರವಸೆ ಈಡೇರಿಸದಿದ್ರೆ ನಮ್ಮ ಸಮುದಾಯದ 17 ಶಾಸಕರಿಂದಲೂ ರಾಜೀನಾಮೆ- ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಪ್ರಸನ್ನಾನಂದ ಸ್ವಾಮೀಜಿ…

kannada t-shirts

ಬೆಂಗಳೂರು,ಜೂ,25,2019(www.justkannada.in):  ಎರಡು ತಿಂಗಳೂಳಗೆ ವಾಲ್ಮಿಕಿ ಸಮುದಾಯಕ್ಕೆ ಶೇ.7.5 ರಷ್ಟು ಮೀಸಲಾತಿ ಭರವಸೆ ಈಡೇರಿಸದಿದ್ದರೆ ನಮ್ಮ ಸಮುದಾಯದ 17 ಶಾಸಕರು ರಾಜೀನಾಮೆ ಕೊಡಿಸುತ್ತೇವೆ ಎಂದು ವಾಲ್ಮಿಕಿ ಸಮುದಾಯದ ಪ್ರಸನ್ನಾನಂದ ಸ್ವಾಮೀಜಿ ಹೇಳಿದ್ದಾರೆ.

ವಾಲ್ಮಿಕಿ ಸಮುದಾಯಕ್ಕೆ ಶೇ. 7.5 ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿ ಇಂದು ಫ್ರೀಡಂ ಪಾರ್ಕ್ ನಲ್ಲಿ ವಾಲ್ಮಿಕಿ ಸಮುದಾಯ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಸನ್ನಾನಂದ ಸ್ವಾಮೀಜಿ, ನಮ್ಮ ಸಮುದಾಯದ 17 ಶಾಸಕರಿದ್ದಾರೆ. ನೀವು ನನ್ನ ಕೈಗೆ ರಾಜಿನಾಮೆ ನೀಡಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಲ್ಲ, ಅವರಪ್ಪನೂ ನನ್ನ ಮಾತುಕ ಕೇಳೋ ಹಂಗೆ ಮಾಡುತ್ತೇನೆ ಎಂದು ಹೇಳಿದರು.

ಇದಾದ ಬಳಿಕ ಡಿಸಿಎಂ ಪರಮೇಶ್ವರ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮೀಸಲಾತಿ ಕುರಿತ ತಮ್ಮ ಬೇಡಿಕೆಯ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಡಿಸಿಎಂ ಭೇಟಿ ಬಳಿಕ ಮಾತನಾಡಿದ ಪ್ರಸನ್ನಾನಂದ ಸ್ವಾಮೀಜಿ, ಡಿಸಿಎಂ ಪರಮೇಶ್ವರ್ ಭೇಟಿ ನೀಡಿ ತಮ್ಮ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ. ಸರ್ಕಾರದ ಮೇಲೆ ವಿಶ್ವಾಸವಿದೆ. ಎರಡು ತಿಂಗಳೊಳಗೆ ತಮ್ಮ ಬೇಡಿಕೆ ಈಡೇರಿಸದಿದ್ದರೇ ನಮ್ಮ ಸಮುದಾಯದ 17 ಶಾಸಕರು ರಾಜೀನಾಮೆ ನೀಡುತ್ತಾರೆ. ನಂತರ ಸರ್ಕಾರ ಉರುಳುತ್ತದೆ. ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Key words: reservation – Valmiki community-resign-mlas- Prasanananda Swamiji-warned

website developers in mysore