ತಕ್ಷಣವೇ ಬಸ್ ಸಂಚಾರ ಆರಂಭಿಸಿ- ಮುಷ್ಕರನಿರತ ಸಾರಿಗೆ ನೌಕರರ ಸಂಘಕ್ಕೆ ಹೈಕೋರ್ಟ್ ನೋಟಿಸ್…

kannada t-shirts

ಬೆಂಗಳೂರು,ಏಪ್ರಿಲ್,20,2021(www.justkannada.in): ಸಂಕಷ್ಟದ ಸಮಯದಲ್ಲಿ  ಮುಷ್ಕರ ಹೂಡುವುದು ಸರಿಯಲ್ಲ. ನಿಮ್ಮ ಬೇಡಿಕೆ ಕಾಯ್ದಿರಿಸಿ ತಕ್ಷಣವೇ ಬಸ್ ಸಂಚಾರ ಸೇವೆ ಆರಂಭಿಸಿ ಎಂದು ಮುಷ್ಕರ ನಿರತ ಸಾರಿಗೆ ನೌಕರರ ಸಂಘಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.jk

ರಾಜ್ಯದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಸಿ ಸಾರಿಗೆ ನೌಕರರು ನಡೆಸುತ್ತಿರುವ  ಅನಿರ್ಧಿಷ್ಟಾವಧಿ ಮುಷ್ಕರ 14ನೇ ದಿನಕ್ಕೆ ಕಾಲಿಟ್ಟಿದೆ. ಸಾರಿಗೆ ನೌಕರರು ಬೇಡಿಕೆ ಈಡೇರೋವರೆಗೆ ಮುಷ್ಕರದಿಂದ ಹಿಂದೆ ಸರಿಯೋದಿಲ್ಲ ಎಂಬುದಾಗಿ ಮುಷ್ಕರ ಮುಂದುವರೆಸಿದೆ.

ಆದರೆ ಈ ಕುರಿತು  ಮುಷ್ಕರ ನಿರತ ಸಾರಿಗೆ ನೌಕರರ ಸಂಘಕ್ಕೆ ನೋಟಿಸ್ ನೀಡಿರುವ  ಮುಖ್ಯ ನ್ಯಾಯಮೂರ್ತಿ ಎಸ್ ಎ ಓಕಾ ಹಾಗೂ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ಪೀಠವು, ಈ ಸಂದರ್ಭದಲ್ಲಿ ಸಾರಿಗೆ ಸಂಚಾರ ವ್ಯವಸ್ಥೆಯ ವ್ಯತ್ಯಯ ಮೂಲಭೂತ ಹಕ್ಕಾಗಿದೆ. ಈ ಹಕ್ಕಿಗೆ ಧಕ್ಕೆಯಾಗುವ ಹಿನ್ನಲೆಯಲ್ಲಿ ಮುಷ್ಕರ ಬಿಟ್ಟು ಕೂಡಲೇ ಸಾರಿಗೆ ಸಂಚಾರ ಆರಂಭಿಸುವಂತೆ ಸೂಚಿಸಿದೆ.reserve-demand-start-bus-service-high-court-notice-strike-transport-employees-union

ಕೋವಿಡ್ ನ ಸಂಕಷ್ಟದಿಂದಾಗಿ ಜನರು ತತ್ತರಿಸಿದ್ದಾರೆ. ಲಸಿಕಾ ಕೇಂದ್ರಕ್ಕೆ ಜನರು ಹೋಗೋದಕ್ಕೂ ಕಷ್ಟ ಆಗಿದೆ. ಆಸ್ಪತ್ರೆಗೆ ಹೋಗೋದಕ್ಕೆ ಬಸ್ ಸಂಚಾರ ಇಲ್ಲದೇ ಕಷ್ಟ ಪಡುವಂತಾಗಿದೆ ಎಂದು ಅಭಿಪ್ರಾಯ ಪಟ್ಟಿದೆ. ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ ಮುಷ್ಕರ ನಡೆಸುವುದು ಸರಿಯಲ್ಲ. ಹೀಗಾಗಿ ನಿಮ್ಮ ಬೇಡಿಕೆಯನ್ನು ಕಾಯ್ದಿರಿಸಿ, ಕೂಡಲೇ ಸಾರಿಗೆ ಸಂಚಾರ ಆರಂಭಿಸುವಂತೆ ಮುಷ್ಕರ ನಿರತ ಸಾರಿಗೆ ನೌಕರರ ಕೂಟಕ್ಕೆ ಹೈಕೋರ್ಟ್  ಸೂಚಿಸಿದೆ.

Key words: Reserve -demand –start- bus –service-  High Court- notice – Strike -Transport Employees Union

website developers in mysore