ಪ್ರಾಮಾಣಿಕ ಅಧಿಕಾರಿಯ ರಾಜೀನಾಮೆ ಅಂಗೀಕರಿಸಿದ್ರೆ ದ್ರೋಹವೆಸಗಿದಂತೆ- ಸಚಿವ ಎಸ್.ಟಿ ಸೋಮಶೇಖರ್.

Promotion

ಮೈಸೂರು,ಜೂನ್,4,2021(www.justkannada.in): ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮತ್ತು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಅವರ ನಡುವಿನ ಜಟಾಪಟಿ ವಿಚಾರ ರಾಜ್ಯದಲ್ಲಿ ಭಾರಿ ಸುದ್ದಿಯಾಗಿದೆ. ಇಬ್ಬರು ಅಧಿಕಾರಿಗಳ ನಡುವಿನ ಭಿನ್ನಾಭಿಪ್ರಾಯ ಶಮನಕ್ಕೆ ಸರ್ಕಾರ ಧಾವಿಸಬೇಕಿದೆ.jk

ಇನ್ನು ಡಿಸಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಬೇಸರ ವ್ಯಕ್ತಪಡಿಸಿ ಪಾಲಿಕೆ ಆಯುಕ್ತೆ ತಮ್ಮ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನ ಅಂಗೀಕರಿಸಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿರುವ ಸಚಿವ ಎಸ್.ಟಿ ಸೋಮಶೇಖರ್, ಪ್ರಾಮಾಣಿಕ ಅಧಿಕಾರಿಯ ರಾಜೀನಾಮೆ ಸ್ವೀಕರಿಸಲ್ಲ. ರಾಜೀನಾಮೆ ಸ್ವೀಕರಿಸಿದರೇ ದ್ರೋಹವೆಸಗಿದ್ದಂತೆ. ಎರಡು ದಿನಗಳಲ್ಲಿ ಈ ಸಮಸ್ಯೆ ಬಗೆಹರಿಸುವುದಾಗಿ ಜನಪ್ರತಿನಿಧಿಗಳು ಮತ್ತು ಪಾಲಿಕೆ ಸದಸ್ಯರಿಗೆ ಭರವಸೆ ನೀಡಿದರು.

ಒಂದು ವೇಳೆ ಎರಡು ದಿನಗಳಲ್ಲಿ ಸಮಸ್ಯೆ ಬಗೆಯರಿಯದಿದ್ದರೇ ನಿಮ್ಮ ಜತೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

Key words:  resignation – honest- officer-  Minister -ST Somashekhar.