ಶಾಸಕ ಸ್ಥಾನಕ್ಕೆ ರಾಜೀನಾಮೆ ಹಿನ್ನೆಲೆ: ನಾರಾಯಣಗೌಡ ಅವರ ನಿವಾಸಕ್ಕೆ ಪೊಲೀಸ್ ಭದ್ರತೆ…

Promotion

ಮಂಡ್ಯ,ಜು,6,2019(www.justkannada.in): ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ದ ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೆ.ಆರ್ ಪೇಟೆ ಶಾಸಕ ನಾರಾಯಣಗೌಡ ಅವರ ನಿವಾಸಕ್ಕೆ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.

ಕೆ.ಆರ್.ಪೇಟೆಯಲ್ಲಿರುವ ಶಾಸಕ ನಾರಾಯಣಗೌಡ ಅವರ ನಿವಾಸಕ್ಕೆ  ಪೊಲೀಸ್ ಭದ್ರತೆ ವಹಿಸಲಾಗಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆ. ಜೆಡಿಎಸ್ ಕಾರ್ಯಕರ್ತರ ಆಕ್ರೋಶಕ್ಕೆ ತುತ್ತಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತ ಕ್ರಮವಾಗಿ ಮನೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇನ್ನು 12 ಮಂದಿ ಅತೃಪ್ತ ಶಾಸಕರು ರಾಜೀನಾಮೆ ನೀಡಿದ್ದು ಇದೀಗ ಮುಂಬೈಗೆ ಪ್ರಯಾಣ ಬೆಳೆಸಲಿದ್ದಾರೆ. ಇನ್ನು ನಾಳೆ ಮತ್ತಷ್ಟು ಶಾಸಕರು ರಾಜೀನಾಮೆ ನೀಡುವ ಸಾಧ್ಯತೆ ಇದೆ.

Key words: Resignation –  Police security – Narayana Gowda’s- residence-krpet