ಸ್ವಾಭಿಮಾನಕ್ಕೆ ಧಕ್ಕೆಯಾದ್ರೆ ಇಂದೇ ರಾಜೀನಾಮೆ: ಲಕ್ಷ್ಮಣ್ ಸವದಿಗೆ ಸಚಿವ ಸ್ಥಾನ ನೀಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ರೇಣುಕಾಚಾರ್ಯ…

Promotion

ಬೆಂಗಳೂರು,ಆ,21,2019(www.justkannada.in):  ಸ್ವಾಭಿಮಾನಕ್ಕೆ ಧಕ್ಕೆಯಾದರೆ ಇಂದೇ ರಾಜೀನಾಮೆ ನೀಡುತ್ತೇನೆ ಎಂದು  ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಶಾಸಕ ರೇಣುಕಾಚಾರ್ಯ,  ಸೋತವರಿಗೆ ಸಚಿವ ಸ್ಥಾನ ಕೊಟ್ಟಿರುವುದಕ್ಕೆ ನನಗೆ ಅಸಮಾಧಾನವಿದೆ. ನನ್ನ ಅಸಮಾಧಾನ ಬಿಎಸ್ ಯಡಿಯೂರಪ್ಪ ಮತ್ತು ಪಕ್ಷದ ಬಗ್ಗೆ ಅಲ್ಲ. ಸೋತವರಿಗೆ ಸಚಿವ ಸ್ಥಾನ ಏಕೆ ಕೊಟ್ಟಿದ್ದಾರೆ. ಅದರ ಬದಲು ಗೆದ್ದವರಿಗೆ ಕೊಡಬಹುದಿತ್ತು. ಹೀಗಾಗಿ ಲಕ್ಷ್ಮಣ್ ಸವದಿಗೆ ಸಚಿವ ಸ್ಥಾನ ನೀಡಿದ್ದಕ್ಕೆ ಬೇಸರವಾಗಿದೆ. ನನ್ನ ವಿರೋಧ ಏನೇ ಇದ್ದರೂ ನೇರವಾಗಿ ಹೇಳುತ್ತೇನೆ ಎಂದರು.

ನಾನು ಯಾವುದೇ ಕಾರಣಕ್ಕೂ ಬಂಡಾಯ ಏಳುವುದಿಲ್ಲ. ಸ್ವಾಭಿಮಾನಕ್ಕೆ ಧಕ್ಕೆಯಾದಲ್ಲಿ ರಾಜಕೀಯ ನಿವೃತ್ತಿ ಹೊಂದುತ್ತೇನೆ. ಬಿಎಸ್ ವೈ ಮನೆ ಮತ್ತು ಪಕ್ಷದ ಬಾಗಿಲು ಬಿಟ್ಟು ನಾನು ಹೋಗಲ್ಲ ಎಂದು ಶಾಸಕ ಎಂ.ಪಿ ರೇಣುಕಾಚಾರ್ಯ ತಿಳಿಸಿದರು.

Key words: Resignation -self-esteem-MLA- Renukacharya-oppose- Laxman savdi