ಡಿ.30ರಿಂದ ಎರಡು ದಿನಗಳ ಕಾಲ ನಂದಿಗಿರಿಧಾಮಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ.

Promotion

ಚಿಕ್ಕಬಳ್ಳಾಪುರ,ಡಿಸೆಂಬರ್,29,2021(www.justkannada.in):  ಹೊಸ ವರ್ಷಚರಣೆ ಹಿನ್ನೆಲೆ ಡಿಸೆಂಬರ್ 30ರಿಂದ ಎರಡು ದಿನಗಳ ಕಾಲ ನಂದಿಗಿರಿಧಾಮಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಚಿಕ್ಕಬಳ್ಳಾಪುರ ಎಸ್ ಪಿ. ಎಸ್ ಪಿ ಜಿಕೆ ಮಿಥುನ್ ಕುಮಾರ್, ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಅವಕಾಶ ಇಲ್ಲ. ಯಾರು ಬರಬಾರದು. ಡಿಸೆಂಬರ್ 30ರ ಸಂಜೆ 6ರಿಂದ ಜನವರಿ 2ರ ಬೆಳಿಗೆ 6ಗಂಟೆವರೆಗೆ  ನಂದಿ ಗಿರಿಧಾಮಕ್ಕೆ ಪ್ರವೇಶವಿಲ್ಲ ಎಂದು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಪ್ರಸಿದ್ಧ ಪ್ರವಾಸಿ ಸ್ಥಳವಾದ ನಂದಿ ಬೆಟ್ಟಕ್ಕೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆ ಹಾಗೂ ಇನ್ನಿತರೆ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ಸಾಧ್ಯತೆ ಇರುವುದರಿಂದ ಹಾಗೂ ಕೋವಿಡ್-19 ರೂಪಾಂತರಿ ಓಮಿಕ್ರಾನ್‌ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಹೀಗಾಗಿ ಈ ನಿರ್ಬಂಧ ವಿಧಿಸಲಾಗಿದೆ.

Key words: restriction- public -access – Nandi hills-chikkaballapur