ಇಂದಿನಿಂದ 4 ದಿನಗಳ ಕಾಲ ಮೈಸೂರು ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ…

kannada t-shirts

ಮೈಸೂರು,ಅಕ್ಟೋಬರ್,14,2020(www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲು ಕೆಲವೇ ದಿನಗಳು ಬಾಕಿ ಇದ್ದು ನಾಡ ಹಬ್ಬ  ಸಮೀಪಿಸುತ್ತಿದ್ದಂತೆ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಮೈಸೂರು ಜಿಲ್ಳಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.jk-logo-justkannada-logo

ಇಂದಿನಿಂದ ಅಕ್ಟೋಬರ್ 18ರವರೆಗೆ ಸಾರ್ವಜನಿಕರಿಗೆ ಚಾಮುಂಡಿಬೆಟ್ಟಕ್ಕೆ ಪ್ರವೇಶವಿರುವುದಿಲ್ಲ. ಹಾಗೂ ಅಕ್ಟೋಬರ್ 23 ರಿಂದ ನವೆಂಬರ್ 1ರ ವರೆಗೂ ಸಹ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರಿಗೆ  ಪ್ರವೇಶವಿರುವುದಿಲ್ಲ. ಇನ್ನು ಆಕ್ಟೋಬರ್ 17 ರ ದಸರಾ ಉದ್ಘಾಟನೆಗೆ ಆಹ್ವಾನಿತರಿಗೆ ಮಾತ್ರ ಚಾಮುಂಡಿಬೆಟ್ಟಕ್ಕೆ ಪ್ರವೇಶ ಕಲ್ಪಿಸಲಾಗಿದೆ.

ಆಕ್ಟೋಬರ್ 15 ರಿಂದ ದಸರಾ ಉದ್ಘಾಟನೆಗೆ ಜಿಲ್ಲಾಡಳಿತ ವತಿಯಿಂದ ಪೂರ್ವ ಸಿದ್ದತೆ ನಡೆಸಲಾಗುತ್ತಿದ್ದು, ಪೂರ್ವ ಸಿದ್ದತೆ ವೇಳೆ ,ಸಿದ್ಧತಾ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಇನ್ನು ಗ್ರಾಮಸ್ಥರು ಹೊರತುಪಡಿಸಿ, ಖಾಸಗಿ ವಾಹನಗಳಿಗೆ ಚಾಮುಂಡಿ ಬೆಟ್ಟಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶಿಸಿದ್ದಾರೆ.restriction-public-mysore-chamundi-hill-4-days-today-dc-rohini-sinduri

ಕೋವಿಡ್ ಮಹಾಮಾರಿ ಹರಡದಂತೆ ಮುಂಜಾಗ್ರತಾ ಕ್ರಮವಾಗಿ  ಜಿಲ್ಲಾಧಿಕಾರಿ  ರೋಹಿಣಿ ಸಿಂಧೂರಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಮಧ್ಯೆ ತಾಯಿ ಚಾಮುಂಡೇಶ್ವರಿ ದೇವಾಲಯದಲ್ಲಿ ಎಂದಿನಂತೆ ಪೂಜೆಗಳು ನೆರವೇರಲಿವೆ.

Key words: Restriction -public – Mysore -Chamundi Hill – 4 days – today-DC- Rohini sinduri

website developers in mysore