ಆಗಸ್ಟ್ 13 ಮತ್ತು 20 ರಂದು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ.

Promotion

ಮೈಸೂರು,ಆಗಸ್ಟ್,12,2021(www.justkannada.in): ನಾಗರ ಪಂಚಮಿ ಹಾಗೂ ವರ ಮಹಾಲಕ್ಷ್ಮೀ ಹಬ್ಬ ಹಿನ್ನೆಲೆ, ಚಾಮುಂಡಿಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಿ ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.

ಕೊರೋನಾ 3ನೇ ಅಲೆ ಭೀತಿ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಆಷಾಢ ಮಾಸದಲ್ಲಿ ಭಕ್ತರ ಪ್ರವೇಶಕ್ಕೆ ನಿಷೇಧ ಹೇರಲಾಗಿತ್ತು. ಇದೀಗ ಮತ್ತೆರೆಡು ದಿನ ಭಕ್ತರ  ಪ್ರವೇಶಕ್ಕೆ ಮತ್ತೆ ನಿರ್ಬಂಧ ವಿಧಿಸಲಾಗಿದೆ.

ಆ.13ರಂದು ನಾಗರಪಂಚಮಿ ಹಾಗೂ ಆಗಸ್ಟ್ 20ರಂದು ವರಮಹಾಲಕ್ಷ್ಮೀ ಹಬ್ಬ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

Key words: Restrictions – entry -devotees – Chamundi Hill – August 13 and 20