ಮೈಸೂರಿನ ಆಯ್ದ ಕೆಲ ಸ್ಥಳಗಳಲ್ಲಿ ಪಟಾಕಿ ಸಿಡಿಸುವುದಕ್ಕೆ ನಿರ್ಬಂಧ ವಿಧಿಸಿ ಆದೇಶ…..

ಮೈಸೂರು,ನವೆಂಬರ್,13,2020,(www.justkannada.in):  ಕೊರೋನಾದಿಂದಾಗಿ ಹಬ್ಬಹರಿದಿನಗಳನ್ನ ಸರಳವಾಗಿ ಆಚರಣೆ ಮಾಡಲಾಗುತ್ತಿದ್ದು ಇದೀಗ ದೀಪಾವಳಿ ಹಬ್ಬ ಹಿನ್ನೆಲೆ ಮೈಸೂರಿನ ಆಯ್ದ ಕೆಲ ಸ್ಥಳಗಳಲ್ಲಿ ಪಟಾಕಿ ಸಿಡಿಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ.

 

CamScanner 11-13-2020 11.24.39
CamScanner 11-13-2020 11.24.39

ಮೈಸೂರು ನಗರ ಪೋಲೀಸ್ ಆಯುಕ್ತ ಚಂದ್ರಗುಪ್ತ  ಪಟಾಕಿ ಸಿಡಿಸುವುದಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ. ಚಾಮರಾಜೇಂದ್ರ ಮೃಗಾಲಯ, ಕುಕ್ಕರಹಳ್ಳಿ ಹಾಗೂ ಕಾರಂಜಿಕೆರೆ ಪ್ರದೇಶ, ಲಿಂಗಾಬುದಿ ಕೆರೆ, ಸಾರ್ವಜನಿಕ ಉದ್ಯಾನಗಳು, ಆಸ್ಪತ್ರೆ, ನರ್ಸಿಂಗ್ ಹೋಂ, ಶೈಕ್ಷಣಿಕ ಸಂಸ್ಥೆಗಳು, ನ್ಯಾಯಾಲಯ ಹಾಗೂ ಧಾರ್ಮಿಕ ಸ್ಥಳಗಳ ನೂರ ಮೀಟರ್ ವ್ಯಾಪ್ತಿಯಲ್ಲಿ ಪಟಾಕಿ ಸಿಡಿಸುವುದಕ್ಕೆ ನಿಷೇಧ ವಿಧಿಸಲಾಗಿದೆ.Restrictions -fireworks –selected- places – Mysore-police commissionar-chandragupta.

ನೂರು ಮೀಟರ್ ವ್ಯಾಪ್ತಿಯೊಳಗೆ ನಿಶಬ್ಧ ವಲಯವೆಂದು ಘೋಷಣೆ ಮಾಡಲಾಗಿದ್ದು,  ನವೆಂಬರ್ 13 ರ ಬೆಳಗ್ಗೆ 6 ರಿಂದ ನವೆಂಬರ್ 16ರ ಮಧ್ಯರಾತ್ರಿ 12 ವರೆಗೆ ಪಟಾಕಿ ಸಿಡಿಸುವುದಕ್ಕೆ ನಿರ್ಭಂಧ ವಿಧಿಸಲಾಗಿದೆ. ವಾಯು ಮಾಲಿನ್ಯ ಹಾಗೂ ಶಬ್ಧ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

Key words: Restrictions -fireworks –selected- places – Mysore-police commissionar-chandragupta