ರಾಜ್ಯದ ಶಾಲೆಗಳ ಬೇಸಿಗೆ ರಜೆ, ಶೈಕ್ಷಣಿಕ ಅವಧಿ ಪರಿಷ್ಕರಣೆ…

kannada t-shirts

ಬೆಂಗಳೂರು,ಮೇ,5,2021(www.justkannada.in): ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು, ಪ್ರಸಕ್ತ‌ ಸನ್ನಿವೇಶವನ್ನು ಗಮನದಲ್ಲಿರಿಸಿ 2020-21 ನೇ ಸಾಲಿನ ರಜಾವಧಿಯನ್ನು ಪರಿಷ್ಕರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.jk

ಈ ಬಗ್ಗೆ ಶಿಕ್ಷಣ ಇಲಾಖೆಯು ಸುತ್ತೋಲೆಯನ್ನು ಹೊರಡಿಸಿರುವ ಬಗ್ಗೆ ಖಚಿತ‌ಪಡಿಸಿಧ ಸಚಿವ ಸುರೇಶ್ ಕುಮಾರ್,  ಪ್ರಾಥಮಿಕ ಶಾಲೆಗಳಿಗೆ ಹಿಂದೆ ತಿಳಿಸಲಾದಂತೆ 14.06.2021ರವರೆಗೆ ಬೇಸಿಗೆ ರಜೆ, ಪ್ರೌಢ ಶಾಲೆಗಳಿಗೆ 27.04.2021 ರಿಂದ 31.05.2021ರವರೆಗೆ ಬೇಸಿಗೆ ರಜೆ ಘೋಷಿಸಲಾಗಿದೆ‌ ಎಂದಿದ್ದಾರೆ.

ಪ್ರೌಢಶಾಲಾ‌ ಶಿಕ್ಷಕರು ರಜೆ ಅವಧಿಯಲ್ಲಿ‌ ಎಸ್.ಎಸ್.ಎಲ್.ಸಿ ಮಕ್ಕಳ ಪರೀಕ್ಷಾ ಸಿದ್ಧತೆಯ ಬಗ್ಗೆ ಗಮನ ಹರಿಸಬೇಕು, ದೂರವಾಣಿ ಮೂಲಕ ಸಂಪರ್ಕದಲ್ಲಿದ್ದು ಅವರ ಕಲಿಕೆಗೆ ಪ್ರೇರೇಪಿಸಬೇಕು ಎಂದು ಸುತ್ತೋಲೆಯಲ್ಲಿ ವಿವರಿಸಲಾಗಿದೆ. ಅದನ್ನು ಶಿಕ್ಷಕರು ಪರಿಪಾಲಿಸಬೇಕೆಂದು ತಿಳಿಸಿದ್ದಾರೆ.

01.06.2021ರಿಂದ 14.06.2021ರವರೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಪುನರ್ಮನನ ತರಗತಿಗಳು ನಡೆಯಲಿವೆ.

2021-2022 ಶೈಕ್ಷಣಿಕ ವರ್ಷ :

15.06.2021ರಿಂದ 8-10 ನೇ ತರಗತಿಗಳು‌ ಪ್ರಾರಂಭವಾಗಲಿವೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

Key words: Revision – Summer holiday-Educational Period -State –Schools-minister suresh kumar

website developers in mysore