ಮಕ್ಕಳಿಗೆ ಸಮಸ್ಯೆಯಾಗದಂತೆ ಪಠ್ಯ ಪರಿಷ್ಕರಣೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ.

Promotion

ಬೆಂಗಳೂರು,ಜೂನ್,2,2023(www.justkannada.in): ಮಕ್ಕಳಿಗೆ ಸಮಸ್ಯೆಯಾಗದಂತೆ  ಸಿಎಂ ಸಿದ್ಧರಾಮಯ್ಯ ಅವರ ಮಾರ್ಗದರ್ಶನದಲ್ಲಿ ಪಠ್ಯ ಪರಿಷ್ಕರಣೆ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪಠ್ಯ ಪುಸ್ತಕ ಪರಿಷ್ಕರಣೆ ಒಂದು ಹಂತಕ್ಕೆ ಬಂದಿದೆ. ಮಕ್ಕಳಿಗೆ ಸಮಸ್ಯೆಯಾಗದಂತೆ ರಾಜ್ಯದಲ್ಲಿ ಹಂತ ಹಂತವಾಗಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲಾಗುವುದು. ಇದಕ್ಕೆ  ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಚರ್ಚೆ ನಡೆಸಲಾಗುತ್ತದೆ.  ಮಕ್ಕಳ ಹಿತದೃಷ್ಟಿಯಿಂದ ಪಠ್ಯಪುಸ್ತಕ ಪರಿಷ್ಕರಣೆ ಮಾಡುತ್ತೇವೆ ಎಂದರು.

ಶಾಲಾ ತರಗತಿ ಪ್ರಾರಂಭ ಮಾಡಲು ಇನ್ನೂ 15 ದಿನಗಳು ಬೇಕು. ಮಕ್ಕಳಿಗೆ ತೊಂದರೆ ಆಗದಂತೆ ಪಠ್ಯಪರಿಷ್ಕರಣೆ ಮಾಡಲಾಗುತ್ತೆ. ನಿರ್ದಿಷ್ಟವಾಗಿ ಇಂತಹ ಪಾಠವೇ ತೆಗೆಯುತ್ತೇವೆ ಅಂತ ಹೇಳಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

Key words: Revision -text – children – Education Minister- Madhu Bangarappa