Saturday, October 3, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಜಮ್ಮು ಮತ್ತು ಕಾಶ್ಮೀರದ ವಿಶೇಷಾಧಿಕಾರದ ಕಲಂ 370, 35ಎ ರದ್ದು: ಅಮಿತ್ ಶಾ ಘೋಷಣೆ

ಜಮ್ಮು ಮತ್ತು ಕಾಶ್ಮೀರದ ವಿಶೇಷಾಧಿಕಾರದ ಕಲಂ 370, 35ಎ ರದ್ದು: ಅಮಿತ್ ಶಾ ಘೋಷಣೆ

ನವದೆಹಲಿ, ಆಗಸ್ಟ್ 05, 2019 (www.justkannada.in): ಪ್ರಮುಖ ಬೆಳವಣಿಗೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ವಿಶೇಷಾಧಿಕಾರ ನೀಡುವ ಸಂವಿಧಾನದ ಕಲಂ 370, 35ಎ ಅನ್ನು ರದ್ದುಗೊಳಿಸಲಾಗಿದೆ ಎಂದು ಘೋಷಿಸಿದ್ದಾರೆ.

ರಾಜ್ಯಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ವಿಪಕ್ಷಗಳ ತೀವ್ರ ಗದ್ದಲದ ನಡುವೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರ ವಿಶೇಷಾಧಿಕಾರ ನೀಡುವ ಸಂವಿಧಾನದ ಕಲಂ 370, 35ಎ ಅನ್ನು ರದ್ದು ಗೊಳಿಸುವ ತಿದ್ದುಪಡಿ ವಿಧೇಯಕವನ್ನು ಮಂಡಿಸಿದ್ದಾರೆ.

ಅತ್ತ ಅಮಿತ್ ಶಾ ತಿದ್ದುಪಡಿ ಮಸೂದೆ ಮಂಡಿಸುತ್ತಿದ್ದಂತೆಯೇ ಇತ್ತ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಸೇರಿದಂತೆ ಹಲವು ಪ್ರತಿಪಕ್ಷ ನಾಯಕರು ತಿದ್ದುಪಡಿ ವಿಧೇಯಕಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಅಂತಿಮವಾಗಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಎಷ್ಟೇ ಸಮಾಧಾನಿಸುವ ಪ್ರಯತ್ನ ಮಾಡಿದರೂ ಸದಸ್ಯರು ಸುಮ್ಮನಾಗಲಿಲ್ಲ.