ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರುತ್ತದೆ  ಎಂದು ರಿಷಬ್ ಶೆಟ್ಟಿ ಹೇಳಿದ್ದು ನಿಜವಲ್ಲ-  ಫೇಸ್ ಬುಕ್ ನಲ್ಲಿ ನಟ ಚೇತನ್ ಪೋಸ್ಟ್​

Promotion

ಬೆಂಗಳೂರು,ಅಕ್ಟೋಬರ್,19,2022(www.justkannada.in): ಆ ದಿನಗಳು  ಖ್ಯಾತಿಯ ನಟ  ಚೇತನ್​ ಅವರು ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ.

ಈ ಚಿತ್ರದ ಕುರಿತು ತಮ್ಮ ಅಭಿಪ್ರಾಯವನ್ನ ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದು, ನಟ ಚೇತನ್ ಪೋಸ್ಟ್ ಸಾಕಷ್ಟು ಸದ್ಧು ಮಾಡುತ್ತಿದೆ.  ‘ಕಾಂತಾರ’ ಚಿತ್ರದಲ್ಲಿ ತೋರಿಸಿದ ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುವುದಿಲ್ಲ. ಇದಕ್ಕೆ ಸಂಬಂಧಿಸಿದಂತೆ ರಿಷಬ್​ ಶೆಟ್ಟಿ ಅವರು ಹೇಳಿರುವುದು ನಿಜವಲ್ಲ ಎಂದು ನಟ ಚೇತನ್​ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಅವರು,  ‘ನಮ್ಮ ಕನ್ನಡದ ಚಲನಚಿತ್ರ ‘ಕಾಂತಾರ’ವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ. ಇದು ನಿಜವಲ್ಲ. ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ’ ಎಂದು ತಿಳಿಸಿದ್ದಾರೆ.

‘ಹೊಂಬಾಳೆ ಫಿಲ್ಮ್ಸ್​’ ಮೂಲಕ ಮೂಡಿಬಂದ  ಈ ಚಿತ್ರವನ್ನು ರಿಷಬ್​ ಶೆಟ್ಟಿ ಅವರು ನಿರ್ದೇಶಿಸಿದ್ದಾರೆ. ಮುಖ್ಯ ಪಾತ್ರದಲ್ಲೂ ಅವರೇ ನಟಿಸಿದ್ದಾರೆ. ಬೇರೆ ಭಾಷೆಗಳಿಗೆ ಡಬ್​ ಆಗಿ ರಿಲೀಸ್​ ಆಗಿದ್ದು, ಎಲ್ಲರೂ ‘ಕಾಂತಾರ’ ಬಗ್ಗೆಯೇ ಮಾತನಾಡುತ್ತಿದ್ದಾರೆ.

Key words:  Rhisib shetty-kanthara-actor-Chethan