ಪೊಲೀಸ್ ಠಾಣೆ ಎದುರು ವಿದೇಶಿ ಪ್ರಜೆಗಳಿಂದ ಗಲಾಟೆ ಪ್ರಕರಣ: ಕಾನೂನು ರೀತಿ ಕ್ರಮಕ್ಕೆ ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆ.

ಬೆಂಗಳೂರು,ಆಗಸ್ಟ್,2,2021(www.justkannada.in):  ಜೆ.ಸಿ ನಗರ ಪೊಲೀಸ್ ಠಾಣೆ ಎದುರು ಗಲಾಟೆ ಮಾಡಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ವಿದೇಶಿ ಪ್ರಜೆಗಳ ವಿರುದ್ಧ ಕಾನೂನು ಕ್ರಮಕ್ಕೆ ಸೂಚಿಸಿದ್ದೇನೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಡ್ರಗ್ಸ್ ಕೇಸ್ ನಲ್ಲಿ ಬಂಧಿತನಾಗಿ ಜೆ.ಸಿ ನಗರ ಪೊಲೀಸರ ವಶದಲ್ಲಿದ್ದ ವಿದೇಶಿ ಪ್ರಜೆ ಆನಾರೋಗ್ಯದಿಂದ ಮೃತಪಟ್ಟಿದ್ದು ಈ ಸಂಬಂಧ ಪೊಲೀಸರೇ ಹೊಡೆದು ಕೊಂದಿದ್ದಾರೆಂದು ಆರೋಪಿಸಿ ಆಫ್ರಿಕನ್ ಪ್ರಜೆಗಳು ಧರಣಿ ನಡೆಸಿದರು. ಈ ವೇಳೆ ಪೊಲೀಸರ ಜತೆ ವಾಗ್ವಾದ ನಡೆಸಿ ಹಲ್ಲೆ ನಡೆಸಿದ್ದರು.

ಈ ಮಧ್ಯೆ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕಾಗಿ ಲಾಠಿಚಾರ್ಜ್ ನಡೆಸಿದ್ದು ಮೂವರು ವಿದೇಶಿ ಪ್ರಜೆಗಳಿಗೆ ಗಾಯಗಳಾಗಿದೆ., ಘಟನೆಯಲ್ಲಿ ಪೊಲೀಸರಿಗೂ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಐವರು ವಿದೇಶಿ ಪ್ರಜೆಗಳನ್ನ ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆ ಕುರಿತು ಮಾತನಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ  ಕಮಲ್ ಪಂತ್, ಘಟನೆ ಬಗ್ಗೆ ಸಿಐಡಿಗೆ ಮಾಹಿತಿ ನೀಡಿದ್ದೇವೆ.  ಪೊಲೀಸರ ಮೇಲೆ ಹಲ್ಲೆ ಸಂಬಂಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡುತ್ತೇವೆ. ಬೇರೆ ಕಾರಣಕ್ಕೆ ವಿದೇಶಿ ಪ್ರಜೆಯ ಡೆತ್ ಆಗಿದೆ. ದೊಡ್ಡ ಗಲಾಟೆಯೇನು ಆಗಿಲ್ಲ. ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದವರ ವಿರುದ್ಧ ಕಾನೂನು ಕ್ರಮಕ್ಕೆ ಸೂಚಿಸಿದ್ದೇನೆ ಎಂದು ತಿಳಿಸಿದರು.

Key words: Riot – foreign –citizen- police station-Police Commissioner -Kamal Pant