ಆಸ್ಕರ್ ರೇಸ್’ಗೆ ಎಂಟ್ರಿ ಕೊಟ್ಟ ರಿಷಬ್ ಶೆಟ್ಟರ ‘ಕಾಂತಾರ’

ಬೆಂಗಳೂರು, ಜನವರಿ 10, 2023 (www.justkannada.in): ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾ ಆಸ್ಕರ್​ ರೇಸ್​​ಗೆ ಎಂಟ್ರಿ ಕೊಟ್ಟಿದೆ.

ಅತ್ಯುತ್ತಮ ಚಿತ್ರ ಹಾಗೂ ಅತ್ಯುತ್ತಮ ನಟ ವಿಭಾಗದಲ್ಲಿಅರ್ಹತಾ ಸುತ್ತನ್ನು ಪ್ರವೇಶಿಸಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್​ ಟ್ವೀಟ್ ಮಾಡಿದೆ.

‘ಕಾಂತಾರ ಸಿನಿಮಾ 2 ಆಸ್ಕರ್ ಅರ್ಹತೆ ಪಡೆದಿರುವ ವಿಚಾರ ತಿಳಿಸಲು ಸಂತಸವಾಗುತ್ತಿದೆ. ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದ’ ಎಂದು ಟ್ವಿಟ್ಟರ್ ನಲ್ಲಿ ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಮಾಡಿದೆ.

ಅಂದಹಾಗೆ ಇತ್ತೀಚೆಗಷ್ಟೇ ‘ಕಾಂತಾರ’ ಸಿನಿಮಾ 100 ದಿನ ಪೂರೈಸಿತ್ತು. ಈ ಸಂತಸವನ್ನು ಚಿತ್ರತಂಡ ಹಂಚಿಕೊಂಡಿತ್ತು. ಅದೇ ರೀತಿ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ಕೂಡ ಆಸ್ಕರ್ ಅರ್ಹತೆ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.