ಬಾಗ್ದಾದ್ ಅಮೆರಿಕ ರಾಯಭಾರ ಕಚೇರಿ ಬಳಿ ರಾಕೆಟ್‌ ದಾಳಿ

Promotion

ಬಾಗ್ದಾದ್(ಇರಾನ್), ಫೆಬ್ರವರಿ 16, 2020 (www.justkannada.in): ಕೆಲ ತಿಂಗಳ ಬಳಿಕ ಮತ್ತೆ ಬಾಗ್ದಾದ್ ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಬಳಿ ಭಾನುವಾರ ಮುಂಜಾನೆ ರಾಕೆಟ್‌ಗಳು ಅಪ್ಪಳಿಸಿವೆ.

ಇರಾನ್ ಮತ್ತು ಅಮೆರಿಕದ ಸಂಘರ್ಷದ ಬೆನ್ನಲ್ಲೇ ಬಾಗ್ದಾದ್‌ನ ಅಮೆರಿಕ ರಾಯಭಾರ ಕಚೇರಿಯ ರಾಕೆಟ್ ದಾಳಿ ನಡೆದಿತ್ತು. ಆದರೆ , ಸಾವು- ನೋವುಗಳು ಮತ್ತು ಹಾನಿಯ ಬಗ್ಗೆ ತಕ್ಷಣದ ಮಾಹಿತಿ ಲಭ್ಯವಾಗಿಲ್ಲ.

ಇರಾನ್​​ ಸೇನಾ ಮುಖ್ಯಸ್ಥ ಖಾಸಿಂ ಸೊಲೈಮನಿಯನ್ನು ಅಮೆರಿಕ ಹತ್ಯೆ ಮಾಡಿದ ಬಳಿಕ ಎರಡು ರಾಷ್ಟ್ರಗಳ ನಡುವೆ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಮೆರಿಕ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಮುಂದಾದ ಇರಾನ್​ ಅಮೆರಿಕ ವಾಯುನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿತ್ತು.

ಬಾಗ್ದಾದ್​​​ನ ಅಮೆರಿಕ ರಾಯಭಾರಿ ಕಚೇರಿಗಳನ್ನು ಗುರಿಯಾಗಿಸಿಕೊಂಡು ರಾಕೆಟ್​​ ದಾಳಿ ನಡೆಸಿತ್ತು.