ವಸತಿ ಕಚೇರಿಯಲ್ಲಿ ಈಜುಕೊಳ ನಿರ್ಮಾಣ: ಸರಕಾರಕ್ಕೆ ಉತ್ತರ ನೀಡಿದ ರೋಹಿಣಿ ಸಿಂಧೂರಿ

kannada t-shirts

ಮೈಸೂರು, ಜೂನ್ 06, 2021 (www.justkannada.in): ಮೈಸೂರು ಜಿಲ್ಲಾಧಿಕಾರಿ ವಸತಿ ಕಚೇರಿಯಲ್ಲಿ ಈಜುಕೊಳ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ರೋಹಿಣಿ ಸಿಂಧೂರಿ ಉತ್ತರ ನೀಡಿದ್ದಾರೆ.

ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ ಪ್ರಕಾಶ್ ಅವರಿಗೆ ಎರಡು ಪುಟಗಳ ಉತ್ತರ ಸಲ್ಲಿಸಿದ ರೋಹಿಣಿ ಸಿಂಧೂರಿ, ಜಿಲ್ಲಾಧಿಕಾರಿ ವಸತಿ ಕಚೇರಿ ಆವರಣದಲ್ಲಿ ಈಜುಕೊಳ ನಿರ್ಮಿಸಬೇಕೆಂಬುದು ಐದು ವರ್ಷಗಳ ಹಿಂದಿನ ಯೋಜನೆಯಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಎಲ್ಲ ಜಿಲ್ಲಾಧಿಕಾರಿ ವಸತಿ ಕಚೇರಿಯಲ್ಲೂ ಹೊಸ ತಂತ್ರಜ್ಞಾನ ಬಳಸಿ ನಿರ್ಮಾಣ ಕಾರ್ಯ ನಡೆಸಲು ನಿರ್ಮಿತಿ ಕೇಂದ್ರ ನಿರ್ಧರಿಸಿತ್ತು. ಅದರ ಪ್ರಾಯೋಗಿಕ ಯೋಜನೆಯಾಗಿ ಈಜುಕೊಳ ನಿರ್ಮಾಣವಾಗಿದೆ ಎಂದು ತಿಳಿಸಿದ್ದಾರೆ.

ನಿರ್ಮಿತಿ ಕೇಂದ್ರದ 28.72 ಲಕ್ಷದಲ್ಲಿ ಈಜುಕೊಳ ನಿರ್ಮಾಣವಾಗಿದೆ. ಪಾರಂಪರಿಕ ಕಟ್ಟಡಕ್ಕೆ ಧಕ್ಕೆಯಾಗಿಲ್ಲ ರೋಹಿಣಿ ಸಿಂಧೂರಿ ಸ್ಪಷ್ಟನೆ ನೀಡಿದ್ದಾರೆ.

website developers in mysore