ಹೊಸ ದಾಖಲೆ: ಸತತ 13 ಪಂದ್ಯ ಗೆದ್ದ ವಿಶ್ವದ ಮೊತ್ತ ಮೊದಲ ಕ್ಯಾಪ್ಟನ್ ರೋಹಿತ್ ಶರ್ಮಾ

Promotion

ಬೆಂಗಳೂರು, ಜುಲೈ 08, 2022 (www.justkannada.in): ಕ್ರಿಕೆಟಿಗ ರೋಹಿತ್ ಶರ್ಮಾ ಹೊಸ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಹೌದು. 2021ರ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಬಳಿಕ ವಿರಾಟ್ ಕೊಹ್ಲಿ ಚುಟುಕು ಕ್ರಿಕೆಟ್ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ರೋಹಿತ್ ನಾಯಕತ್ವ ವಹಿಸಿಕೊಂಡಿದ್ದರು.

ಇದೀಗ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ ಸತತ 13 ಪಂದ್ಯಗಳನ್ನು ಗೆದ್ದ ವಿಶ್ವದ ಮೊತ್ತ ಮೊದಲ ಕ್ಯಾಪ್ಟನ್ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ನಿರ್ಮಿಸಿದ್ದಾರೆ.

ಐಪಿಎಲ್ ನಲ್ಲೂ ಯಶಸ್ವಿ ನಾಯಕ  ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ರೋಹಿತ್ ಶರ್ಮಾ ಇದೀಗ ಮತ್ತೊಂದು ಹೊಸ ವಿಶ್ವ ದಾಖಲೆಗೆ ಪಾತ್ರರಾಗಿದ್ದಾರೆ.