ಮಕ್ಕಳ ಅಶ್ಲೀಲ ಚಿತ್ರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದ ರೌಡಿ ಶೀಟರ್ ಅಂದರ್ !

Promotion

ಬೆಂಗಳೂರು, ಜುಲೈ24, 2020 (www.justkannada.in): ಮಕ್ಕಳ ಅಶ್ಲೀಲ ಚಿತ್ರಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದ ರೌಡಿಶೀಟರ್‌ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಚಾಮರಾಜಪೇಟೆ ಮೂಲದ ರೌಡಿಶೀಟರ್ ಮಂಜುನಾಥ್ ಅಲಿಯಾಸ್ ಕೋಳಿ ಮಂಜ ಬಂಧಿತ ಆರೋಪಿ.

ಈತ ಮಕ್ಕಳ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದ. ಆರೋಪಿ ವಿರುದ್ಧ ಕ್ರಮ ಜರಗಿಸುವಂತೆ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಸಾರ್ವಜನಿಕರು ದೂರು ನೀಡಿದ್ದರು.

ಇದೀಗ ಸಾರ್ವಜನಿಕರು ನೀಡಿದ ದೂರಿನ ಅನ್ವಯ ಪೊಲೀಸರು ಆರೋಪಿ ಮಂಜುನಾಥ್‍ನನ್ನು ಬಂಧಿಸಿದ್ದಾರೆ.